ಹಾಸನದಲ್ಲಿ ನಾನು ಇರುವಾಗಲೇ ಏರ್‌ಪೋರ್ಟ್ ನಿರ್ಮಾಣವಾಗಲಿ : ಹೆಚ್ ಡಿಡಿ
ಹಾಸನ : ಹಾಸನದಲ್ಲಿ ನಾನು ಇರುವಾಗಲೇ ಏರ್ ಪೋರ್ಟ್ ನಿರ್ಮಾಣವಾಗಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಮನವಿ ಮಾಡಿಕೊಂಡಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ತುಮಕೂರು ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ.
ಶಿವಮೊಗ್ಗದಲ್ಲಿಯೂ ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ಹಾಸನದಲ್ಲಿ ಇನ್ನೂ ಕಾಮಗಾರಿ ಆರಂಭವೇ ಆಗಿಲ್ಲ. ನನ್ನ ಅವಧಿಯಲ್ಲಿ ಆಗಿದ್ದು ಇನ್ನೂ ಕೆಲಸ ಆರಂಭ ಆಗಿಲ್ಲ ಎಂದು ಬೇಸರ ಹೊರಹಾಕಿದರು.
ಇದೇ ವೇಳೆ ನಮ್ಮ ಜಿಲ್ಲೆಯ ಕೆಲಸಗಳಿಗೆ ಆದ್ಯತೆ ನೀಡಿ ಎಂದು ಸರ್ಕಾರವನ್ನ ಒತ್ತಾಯಿಸಿದ ಹೆಚ್ ಡಿ ದೇವೇಗೌಡ, ನಾನು ಇರುವಾಗಲೇ ಏರ್‌ಪೋರ್ಟ್ ನಿರ್ಮಾಣವಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದರು.
ಹಾಸನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ವಿವಿಧ ಬೆಳೆಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಫ್ತು ಮಾಡುವ ಅವಕಾಶವಿದೆ.
3ಹೀಗಾಗಿ ಜಿಲ್ಲೆಗೆ ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಅಲ್ಲದೆ ಹಾಸನ ಜಿಲ್ಲೆಗೆ ಯಾವ ಶಾಶ್ವತ ಯೋಜನೆ ಕೊಟ್ಟಿದ್ದೀರಿ. ಈ ಬಗ್ಗೆ ಯೋಜನೆ ಬಗ್ಗೆ ಮಾಹಿತಿ ನೀಡಿ ಎಂದು ಮುಖ್ಯಮಂತ್ರಿಗಳಿಗೆ ಕ್ಲಾಸ್ ತೆಗೆದುಕೊಂಡ ದೊಡ್ಡಗೌಡರು, ಹಾಸನ ಜಿಲ್ಲೆಗೆ ಐಐಟಿ ತರುವ ಬಗ್ಗೆ ಪ್ರಧಾನಿ ಭೇಟಿಯಾಗಿ ಚರ್ಚೆ ನಡೆಸುವುದಾಗಿ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









