ಮಧ್ಯರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಕಿಡಿಗೇಡಿಗಳು..!
ನವದೆಹಲಿ: ನಿನ್ನೆ ಮಧ್ಯರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಿಡಿಗೇಡಿಗಳು ಪಾಕಿಸ್ತಾನಕ್ಕೆ ಜೈಕಾರ ಹಾಕಿರುವ ಘಟನೆ ನಡೆದಿದೆ. ಖಾನ್ ಮಾರುಕಟ್ಟೆ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೆಲ ದುಷ್ಕರ್ಮಿಗಳು ಘೋಷಣೆ ಕೂಗುತ್ತಾ ಬೀದಿಬೀದಿಗಳಲ್ಲಿ ಸುತ್ತಿದ್ದಾರೆ. ನಡುರಾತ್ರಿ ಸುಮಾರು ಒಂದು ಗಂಟೆಯ ವೇಳೆ ಎಲ್ಲೆಡೆ ಮೌನವಾಗಿದ್ದ ಸಂದರ್ಭದಲ್ಲಿ ಈ ರೀತಿ ಘೋಷಣೆ ಕೂಗುತ್ತಿದ್ದಂತೆಯೇ ಮಲಗಿದ್ದವರೆಲ್ಲಾ ಗಾಬರಿಯಿಂದ ಎದ್ದಿದ್ದಾರೆ.
ಕೆಲವರು ಗಾಬರಿಗೊಂಡು ಸಹಾಯವಾಣಿಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಅನುಮಾನದ ಮೇರೆಗೆ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ.
ಜನ ಹಣದುಬ್ಬರದಿಂದ ಬಳಲುತ್ತಿದ್ದರೆ, ಮೋದಿ ಸರಕಾರ ತೆರಿಗೆ ಸಂಗ್ರಹದಲ್ಲಿ ಬ್ಯುಸಿಯಾಗಿದೆ: ರಾಹುಲ್ ಗಾಂಧಿ
ರಾತ್ರಿ ದೆಹಲಿ ಖಾನ್ ಮಾರುಕಟ್ಟೆಯಲ್ಲಿ ದೇಶದ್ರೋಹಿ ಘೋಷಣೆ ಕೂಗಿರುವ ಬಗ್ಗೆ ದೂರು ದಾಖಲಿಸಲಾಗಿತ್ತು. ಸಹಾಯವಾಣಿಗೆ ಕೆಲವರು ಕರೆ ಮಾಡಿದ್ದರು. ನಂತರ ಸ್ಥಳಕ್ಕೆ ಧಾವಿಸಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ದೆಹಲಿಯ ತುಘಲಕ್ ರಸ್ತೆಯಲ್ಲಿ ಖಾನ್ ಮಾರುಕಟ್ಟೆ ಮೆಟ್ರೋ ನಿಲ್ದಾಣದ ಸುತ್ತಮುತ್ತಲಿನಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದವರು ಇಂತಹ ಘೋಷಣೆಗಳನ್ನ ಕೂಗಿದ್ದಾರೆ. ಅವರ ಬೆನ್ನುಹತ್ತಿ ಹೋದ ಪೊಲೀಸರು ಬೈಕಿನಲ್ಲಿದ್ದ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel