ನಾನಿಲ್ಲಿ ಮನ್ ಕಿ ಬಾತ್ ಹೇಳಲು ಬಂದಿಲ್ಲ, ನಿಮ್ಮ ಮಾತು ಕೇಳಲು ಬಂದಿದ್ದೇನೆ : ರಾಹುಲ್ ಗಾಂಧಿ
ತಮಿಳುನಾಡು : ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಸಮೀಪದಲ್ಲೇ ಇರುವ ಬೆನ್ನಲ್ಲೇ ಪ್ರಾದೇಶಿಕ ಪಕ್ಷಗಳು ಹಾಗೂ ರಾಷ್ಟ್ರೀಯ ಪಕ್ಷಗಳು ತಯಾರಿಗಳಲ್ಲಿ ತೊಡಗಿವೆ. ಇತ್ತ ಪ್ರಚಾರ ಕಾರ್ಯದಲ್ಲಿ ನಿರತವಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗಾಗಲೇ ತಮಿಳುನಾಡಿನಲ್ಲಿ 3 ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ.
ಜನ ಹಣದುಬ್ಬರದಿಂದ ಬಳಲುತ್ತಿದ್ದರೆ, ಮೋದಿ ಸರಕಾರ ತೆರಿಗೆ ಸಂಗ್ರಹದಲ್ಲಿ ಬ್ಯುಸಿಯಾಗಿದೆ: ರಾಹುಲ್ ಗಾಂಧಿ
ಈ ವೇಳೆ ಈರೋಡ್ ನಲ್ಲಿ ಪಕ್ಷದ ಕಾರ್ಯಕ್ರಮ ಸಭೆ ಉದ್ಘಾಟಿಸಿ ಮಾತನಾಡಿದ ರಾಹುಲ್ ಗಾಂಧಿ ನಾನು ಇಲ್ಲಿ ಮನ್ ಕಿ ಬಾತ್ ಹೇಳಲು ಬಂದಿಲ್ಲ, ಬದಲಾಗಿ ನಿಮ್ಮ ಮಾತನ್ನು ಕೇಳಲು ಬಂದಿದ್ದೇನೆ ಎಂದು ಹೇಳಿ ಪ್ರಧಾನಿ ಮೋದಿಗೆ ಟಾಂಗ್ ನೀಡಿದರು.
ಅಲ್ದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳುನಾಡಿನ ಸಂಸ್ಕೃತಿ ಮತ್ತು ಭಾಷೆಯನ್ನು ಅವಮಾನಿಸುತ್ತಿದ್ದಾರೆ, ಆದರೆ ನಾನು ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ದೇಶವು ಐದು ಅಥವಾ ಆರು ಉದ್ಯಮಿಗಳ ಕೈಯಲ್ಲಿದೆ ಅವರು ರಾಜ್ಯ ಸರ್ಕಾರವನ್ನು ನಿಯಂತ್ರಿಸಿದರೆ ತಮಿಳುನಾಡಿನ ಜನರನ್ನು ನಿಯಂತ್ರಿಸಬಹುದು ಎಂದು ಭಾವಿಸಿದ್ದಾರೆ. ಆದರೆ ಅದು ಎಂದಿಗೂ ಸಾಧ್ಯವಿಲ್ಲ ಎಂದು ರಾಹುಲ್ ಕಿಡಿ ಕಾರಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel