ಕೋಲಾರ kolar | ಶಾಲಾ ವಾಹನ ಪಲ್ಟಿ, 15ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ಕೋಲಾರ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಕೋಲಾರದ ಮುಳಬಾಗಿಲಿನ ಸೀಗೇನಹಳ್ಳಿ ಗೇಟ್ ಬಳಿ ನಡೆದಿದೆ.
ಮುಳಬಾಗಿಲು ಪಟ್ಟಣದ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆ ವಾಹನ ಇದಾಗಿದೆ. ಮಕ್ಕಳನ್ನು ಕರೆದೊಯ್ಯುವಾಗ ಚಾಲಕನ ನಿಯಂತ್ರಣತಪ್ಪಿ ವಾಹನ ಪಲ್ಟಿಯಾಗಿದೆ.
ಪರಿಣಾಮ 15ಕ್ಕು ಹೆಚ್ಚು ಮಕ್ಕಳು ಗಾಯಗೊಂಡಿದ್ದು, ಸದ್ಯ ಗಾಯಾಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









