ದಾವಣಗೆರೆ: ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಕಳೆಗಟ್ಟಿದ್ದು, ಬೆಣ್ಣೆ ನಗರಿ ದಾವಣಗೆರೆಯಲ್ಲೂ ಸಂಭ್ರಮ ಮನೆ ಮಾಡಿದೆ. ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಗಣರಾಜ್ಯೋತ್ಸವದ ಧ್ವಜಾರೋಹಣ ಮಾಡಿದರು.

ಧ್ವಜಾರೋಹಣಕ್ಕೂ ಮೊದಲು ಸಚಿವರು ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಬಳಿಕ ದಾವಣಗೆರೆ ಜಿಲ್ಲಾ ಪೊಲೀಸ್, ಸೇವಾದಳ, ಸ್ಕೌಟ್ ಅಂಡ್ ಗೈಡ್ಸ್ ಪಥಸಂಚನ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಎ.ರವೀಂದ್ರನಾಥ್, ಸಂಸದ ಜಿ.ಎಂ ಸಿದ್ದೇಶ್ವರ್ ಸೇರಿದಂತೆ ನೂರಾರು ಮಂದಿ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಪಾಲ್ಗೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








