ಬೆಳಗಾವಿ: 72ನೇ ಗಣರಾಜ್ಯೋತ್ಸವದ ಸಂಭ್ರಮ ಕುಂದಾನಗರಿ ಬೆಳಗಾವಿಯಲ್ಲೂ ಕಳೆಕಟ್ಟಿದೆ. ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಪರೇಡ್ ನಲ್ಲಿ ಗೌರವ ವಂದನೆ ಸ್ವೀಕರಿಸಿ, ಗಣರಾಜ್ಯೋತ್ಸವದ ಸಂದೇಶವನ್ನು ನೀಡಿದರು.

ಭಾರತದ ಪ್ರತಿಷ್ಠಿತ ನಾಗರಿಕ ಪುರಸ್ಕಾರವಾದ ಪದ್ಮವಿಭೂಷಣ ಪ್ರಶಸ್ತಿಗೆ ಹಿರಿಯ ಸಾಹಿತಿ, ಬೆಳಗಾವಿ ಜಿಲ್ಲೆಯವರೇ ಆದ ಡಾ. ಚಂದ್ರಶೇಖರ ಕಂಬಾರ ಅವರು ಭಾಜನರಾಗಿರುವುದು ಹೆಮ್ಮೆಯ ಸಂಗತಿ. ಹೀಗಾಗಿ ಸಮಸ್ತ ಬೆಳಗಾವಿ ಜಿಲ್ಲೆಯ ನಾಗರಿಕರ ಪರವಾಗಿ ಚಂದ್ರಶೇಖರ ಕಂಬಾರ ಅವರನ್ನು ಹಾರ್ದಿಕವಾಗಿ ಅಭಿನಂದಿಸುವುದಾಗಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








