ನವದೆಹಲಿ: ಸದ್ಯ ದೇಶದಲ್ಲಿ ಕೊರೊನಾಸುರನ ರೌದ್ರನರ್ತನ ಜೋರಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2000 ರ ಗಡಿ ದಾಟಿದ್ದು ಒಟ್ಟು 50ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಮಹಾಮಾರಿಯ ಹೊಡೆತಕ್ಕೆ ಭಾರತ ತತ್ತರಿಸಿ ಹೋಗುತ್ತಿದ್ದು, ಭಾರತದ ನೆರವಿಗೆ ವಿಶ್ವಬ್ಯಾಂಕ್ ಮುಂದಾಗಿದೆ. ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ ಒಟ್ಟು ಒಂದು ಬಿಲಿಯನ್ ಡಾಲರ್ ಅಂದ್ರೆ 7634 ಕೋಟಿ ರೂಪಾಯಿ ನೀಡಲು ವಿಶ್ವಬ್ಯಾಂಕ್ ಮುಂದಾಗಿದೆ. ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ವೈದ್ಯಕೀಯ ಸಲಕರಣೆ, ಸ್ಕ್ರೀನಿಂಗ್, ಸೋಂಕಿತರ ಪತ್ತೆ ಹಾಗೂ ಪ್ರಯೋಗಾಲಯಗಳ ನಿರ್ಮಾಣ ಸೇರಿದಂತೆ ಹಲವು ಮೂಲ ಸೌಕರ್ಯಗಳಿಗಾಗಿ ವಿಶ್ವಬ್ಯಾಂಕ್ ಸಹಾಯಕ್ಕೆ ಮುಂದಾಗಿದೆ.
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ
ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...








