ಮುಂಬೈ: ಮಹಾರಾಷ್ಟ್ರದ ರಾಜಕಾರಣಿಗಳಿಗೆ ಕರ್ನಾಟಕ ಜತೆ ಗಡಿತಂಟೆ ಕೆದಕದೇ ಇದ್ದರೆ ನಿದ್ರೆ ಬರುವುದಿಲ್ಲವೇ ಎನ್ನುವಂತಾಗಿದೆ. ಇತ್ತೀಚೆಗೆ ಬೆಳಗಾವಿ ಸೇರಿದಂತೆ ಕರ್ನಾಟಕದ ಗಡಿ ಪ್ರದೇಶಗಳನ್ನು `ಕರ್ನಾಟಕ ಆಕ್ರಮಿತ ಪ್ರದೇಶಗಳು’ ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದ ಮಾಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಇಂದು ಮತ್ತೆ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಆಗ್ರಹಿಸುವ ಮೂಲಕ ಮತ್ತೆ ಗಡಿ ವಿವಾದದ ಕಿಡಿಗೆ ತುಪ್ಪ ಹಾಕಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಡಾ.ದೀಪಕ್ ಪವಾರ್ ಮರಾಠಿಯಲ್ಲಿ ಬರೆದಿರುವ `ಮಹಾರಾಷ್ಟ್ರ ಕರ್ನಾಟಕ ಸೀಮಾವಾದ್: ಸಂಘರ್ಷ್ ಅನಿ ಸಂಕಲ್ಪ್’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಉದ್ಧವ್ ಠಾಕ್ರೆ, ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನಿರ್ಧಿಷ್ಟ ಚೌಕಟ್ಟಿನ ಅಡಿಯಲ್ಲಿ ಕೆಲಸ ಮಾಡಬೇಕೆಂದು ಕರೆ ನೀಡಿದ್ದಾರೆ.

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ನೀಡುವವರೆಗೂ ಗಡಿಯಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸುವಂತೆ ಠಾಕ್ರೆ ಮನವಿ ಮಾಡುವ ಮೂಲಕ ಗಡಿವಿವಾದ ಮತ್ತೆ ಭುಗಿಲೇಳುವ ಸಾಧ್ಯತೆ ಇದೆ.
ಈವರೆಗೆ ಏನಾಗಿದೆಯೋ ಅದೆಲ್ಲ ಆಗಿಹೋಯಿತು. ಈಗ ನಾವು ಗೆಲ್ಲಲು ಹೋರಾಡಬೇಕಿದೆ. ದೀರ್ಘ ಕಾಲದಿಂದಲೂ ಉಳಿದಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ಧಿಷ್ಟ ಸಮಯದಲ್ಲಿ ಪರಿಹರಿಸಿಕೊಳ್ಳುವತ್ತ ನಾವು ಕೆಲಸ ಮಾಡಬೇಕಾಗಿದೆ ಎಂದು ಎನ್‍ಸಿಪಿ ನಾಯಕ ಶರದ್ ಪವಾರ್ ಸೇರಿದಂತೆ ಮಹಾರಾಷ್ಟ್ರ ಉನ್ನತ ನಾಯಕರ ಸಮ್ಮುಖದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ.

ಮರಾಠಿ ಭಾಷೆ ಮಾತನಾಡುವ ಮೇರೆ ಕರ್ನಾಟಕ ಸರ್ಕಾರ ದೌರ್ಜನ್ಯ ನಡೆಸುತ್ತಾ ಬಂದಿದೆ. ಹೀಗಾಗಿ ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಈ ಹೋರಾಟದಲ್ಲಿ ಗೆಲುವು ಸಾಧಿಸಲೇಬೇಕಿದೆ ಎಂದು ಠಾಕ್ರೆ ಸೂಚನೆ ನೀಡಿದರು.
ಗಡಿ ವಿವಾದದ ವಿಚಾರಣೆ ಸುಪ್ರೀಂಕೋರ್ಟಿನಲ್ಲಿ ಬಾಕಿ ಉಳಿದಿದೆ. ಇದರ ನಡುವೆಯೇ ಕರ್ನಾಟಕ ಸರ್ಕಾರ ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಣೆ ಮಾಡಿ ಸುವರ್ಣಸೌಧ ನಿರ್ಮಿಸಿದೆ. ಪ್ರತಿವರ್ಷ ಬೆಳಗಾವಿಯಲ್ಲೇ ಅಧಿವೇಶನ ನಡೆಸುತ್ತಿರುವ ಕರ್ನಾಟಕದ ವರ್ತನೆ ನ್ಯಾಯಾಂಗ ನಿಂದನೆಯಲ್ಲೇ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟ್ ಸಮಸ್ಯೆಯನ್ನು ಪರಿಹರಿಸುವ ಕೊನೆಯ ದಾರಿಯಾಗಿದೆ. ನಾವು ನಮ್ಮ ವಿಚಾರಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅದರ ಮುಂದಿಡಬೇಕು. ಮುಖ್ಯಮಂತ್ರಿ (ಠಾಕ್ರೆ) ಅವರು ವೈಯಕ್ತಿಕವಾಗಿ ಈ ಕುರಿತು ಕೆಲಸ ಮಾಡುತ್ತಿದ್ದಾರೆ’ ಎಂದು ಎನ್‍ಸಿಪಿ ನಾಯಕ ಶರದ್ ಪವಾರ್ ಹೇಳಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಎಂಇಎಸ್ ವಿರುದ್ಧ ಠಾಕ್ರೆ ಕಿಡಿ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ಸಮರ್ಥವಾಗಿ ಬಳಸಿಕೊಳ್ಳದೆ ಎಂಇಎಸ್(ಮಹಾರಾಷ್ಟ್ರ ಏಕೀಕರಣ ಸಮಿತಿ) ಕೇವಲ ರಾಜಕೀಯ ಲಾಭಕ್ಕೆ ದುರುಪಯೋಗಪಡಿಸಿಕೊಳ್ಳುತ್ತಿದೆ. ಬೆಳಗಾವಿಯಲ್ಲಿ ಎಂಇಎಸ್ ತನ್ನ ಪ್ರಾಬಲ್ಯ ಕಳೆದುಕೊಳ್ಳುವ ಭೀತಿಯಿಂದ ಈ ರೀತಿ ಮಾಡುತ್ತಿದೆ ಎಂದು ಎಂದು ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








