ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಕೊರೊನಾ ಭೀತಿ ಎದುರಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರಗಂದೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿದ್ದ 24 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ.
ಕೊರೊನಾ ಪಾಸಿಟಿವ್ ಬಂದ ಎಲ್ಲಾ ವಿದ್ಯಾರ್ಥಿಗಳನ್ನು ಎರಡು ಆಂಬ್ಯುಲೆನ್ಸ್ ಮೂಲಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊರೊನಾ ಸೋಂಕು ಕಾಣಿಸಿಕೊಂಡವರೆಲ್ಲರೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು. ಜನವರಿ 11ರಿಂದ ಕಾಲೇಜಿಗೆ ತೆರಳುತ್ತಿದ್ದರು. ಎಲ್ಲಾ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಗರಗಂದೂರಿನ ಮೊರಾರ್ಜಿ ವಸತಿ ಶಾಲೆಯಲ್ಲಿ 76 ದ್ವತೀಯ ಪಿಯುಸಿ ವಿದ್ಯಾರ್ಥಿಗಳಿದ್ದಾರೆ. ಈ ಪೈಕಿ 24 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯಕ್ಕೆ ಮೊರಾರ್ಜಿ ವಸತಿ ಶಾಲೆಗೆ ರಜೆ ನೀಡಿದ್ದು, ಕಾಲೇಜನ್ನು ಸ್ಯಾನಿಟೈಸ್ ಮಾಡಲಾಗಿದೆ.
ಜನವರಿ 1ರಿಂದ ಎಸ್‍ಎಸ್‍ಎಲ್ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲಾಗಿದೆ. ಆದರೆ, ಮೊರಾರ್ಜಿ ಶಾಲೆಯೊಂದರಲೇ 24 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವುದು ಆತಂಕ ಸೃಷ್ಟಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








