ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ ಮನಗೂಳಿ(85) ವಿಧಿವಶರಾಗಿದ್ದಾರೆ.
ಉಸಿರಾಟದ ಜತೆಗೆ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಂ.ಸಿ ಮನಗೂಳಿ ಅವರನ್ನು ಕಳೆದ 15 ದಿನಗಳಿಂದ ಬೆಂಗಳೂರಿನ ಸಾಗರ್ ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ 1 ಗಂಟೆಗೆ ಮೃತಪಟ್ಟಿದ್ದಾರೆ.

ಇಂದು ಮಧ್ಯಾಹ್ನ ಪಾರ್ಥಿ ಶರೀರವನ್ನು ಸಿಂಧಗಿಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದೆ.
1994ರಲ್ಲಿ ದೇವೇಗೌಡರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದ ಎಂ.ಸಿ ಮನಗೂಳಿ, 2018ರ ಸಮ್ಮಿಶ್ರ ಸರ್ಕಾರದಲ್ಲಿ ತೋಟಗಾರಿಗೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂಧಗಿ ಕ್ಷೇತ್ರದಿಂದ 7 ಬಾರಿ ಚುನಾವಣೆ ಸ್ಪರ್ಧಿಸಿ 2 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಮನಗೂಳಿ ಅವರನ್ನು ಆ ಭಾಗದ ಮನಗೂಳಿ ಮುತ್ಯಾ ಎಂದೇ ಪ್ರೀತಿಯಿಂದ ಕರೆಯುತ್ತಿದ್ದರು.

1937ರ ಅಕ್ಟೋಬರ್ 29ರಂದು ಸಿಂಧಗಿಯಲ್ಲಿ ಜನಿಸಿದ್ದ ಮಲ್ಲಪ್ಪ ಚನ್ನವೀರ ಮನಗೂಳಿ ಅವರಿಗೆ ಐವರು ಮಕ್ಕಳು. 4 ಗಂಡು ಮಕ್ಕಳು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ದೇವೇಗೌಡರ ಸಂತಾಪ..!
ಜೆಡಿಎಸ್ ಶಾಸಕ ಎಂ.ಸಿ ಮನಗೂಳಿ ನಿಧನಕ್ಕೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ಮನಗೂಳಿ ರಾಜಕೀಯ ಹಾಗೂ ವೈಯಕ್ತಿಕವಾಗಿ ಹಲವು ದಶಕಗಳ ಒಡನಾಡಿಯಾಗುದ್ದರು. ಮಾನಗೂಳಿ ನಿಧನದಿಂದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ಆಘಾತವಾಗಿದೆ. ಭಗವಂತ ಮೃತರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವಿಟರ್‍ನಲ್ಲಿ ಕಂಬನಿ ಮಿಡಿದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








