ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದ್ದು, ನಿನ್ನೆ ಮಧ್ಯಾಹ್ನದಿಂದ ಇವತ್ತಿನ ಬೆಳಗ್ಗಿನವರೆಗೆ ಕೇವಲ 1 ಕೇಸ್ ದೃಢಪಟ್ಟಿದೆ. ರಾಜ್ಯಕ್ಕೆ ಕೊರೊನಾ ಕಾಲಿಟ್ಟಾಗಿನಿಂದಲೂ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ವು, ಆದ್ರೆ ನಿನ್ನೆ ಮಧ್ಯಾಹ್ನದಿಂದ ಇಲ್ಲಿಯವರೆಗೆ ಕೇವಲ ಒಂದೇ ಕೇಸ್ ಪತ್ತೆಯಾಗಿರುವುದು ಸಮಾಧಾನದ ಸಂಗತಿಯಾಗಿದೆ.
ನಿನ್ನೆ ಬೆಳಗ್ಗೆ ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಬಳಿಕ ಮಾಹಿತಿ ನೀಡಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ ಎಂದಿದ್ದರು. ನಿನ್ನೆ ಒಂದೇ ದಿನ 10ಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗಿದ್ವು.
ಇನ್ನು ಹೊಸದಾಗಿ ಕೊರೊನಾ ಕೇಸ್ ಪತ್ತೆಯಾಗಿರೋದು ಬಾಗಲಕೋಟೆಯಲ್ಲಿ. 75 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ತಗುಲಿದೆ. ಬಾಗಲಕೋಟೆಯ ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತನಿಗೆ ಚಿಕಿತ್ಸೆ ನೀಡಲಾಗ್ತಿದೆ.








