ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ 9, 10, 11 ಮತ್ತು 11ನೇ ತರಗತಿಗಳನ್ನು ಫೆಬ್ರವರಿ 1ರಿಂದ ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುವುದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಎಲ್ಲ ತರಗತಿಗಳನ್ನು ಆರಂಭಿಸಬೇಕೆಂಬ ವಿದ್ಯಾರ್ಥಿ ಮತ್ತು ಪೋಷಕ ವಲಯದ ಬೇಡಿಕೆಯ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮತ್ತು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇದರೊಂದಿಗೆ ಈಗಾಗಲೇ ಆರಂಭವಾಗಿರುವ 10 ಮತ್ತು 12ನೇ ತರಗತಿಗಳೂ ಸಹ ಮೊದಲಿನಂತೆ ವಾರದ 6 ದಿನ ಫುಲ್ ಟೈಮ್ ನಡೆಯಲಿವೆ ಎಂದರು.
ಒಂದರಿಂದ ಎಂಟನೇ ತರಗತಿಗಳನ್ನು ಆರಂಭಿಸುವ ಕುರಿತಂತೆ ಫೆಬ್ರವರಿ ಎರಡನೇ ವಾರದಲ್ಲಿ ಆರೋಗ್ಯ ಇಲಾಖೆ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರಸ್ತುತ 9ರಿಂದ 12ವರೆಗಿನ ತರಗತಿಗಳು ಪೂರ್ಣ ಅವಧಿಯಲ್ಲಿ ಸಮಿತಿಯ ಮಾರ್ಗದರ್ಶನದಂತೆ ಕೋವಿಡ್ ನಿಯಮಗಳನ್ನು ಅನುಸರಿಸಿ ನಡೆಯಲಿವೆ. ಹಾಗೆಯೇ 6ರಿಂದ 8ನೇ ತರಗತಿಗಳಿಗೆ ಪರಿಷ್ಕೃತ ವಿದ್ಯಾಗಮ ತರಗತಿಗಳು ಈಗ ನಡೆಯುತ್ತಿರುವಂತೆ ಮುಂದುವರೆಯಲಿವೆ ಎಂದು ಸುರೇಶ್ ಕುಮಾರ್ ಹೇಳಿದರು.
ಈಗಾಗಲೇ ಆರಂಭವಾಗಿರುವ 12ನೇ ತರಗತಿಯ ಸರಾಸರಿ ಶೇ.75, 10ನೇ ತರಗತಿಯ ಶೇ.70, 6ರಿಂದ 9ನೇ ತರಗತಿಯ ವಿದ್ಯಾಗಮ ತರಗತಿಯ ಹಾಜರಾತಿ ಶೇ.45ರಷ್ಟು ಹಾಜರಾತಿ ಇರುವ ಅಂಶವನ್ನು ತಾಂತ್ರಿಕ ಸಲಹಾ ಸಮಿತಿ ಅವಲೋಕಿಸಿ 9 ಮತ್ತು 11ನೇ ತರಗತಿಗಳ ಆರಂಭಕ್ಕೆ ಅನುಮತಿ ನೀಡಿದೆ ಎಂದು ತಿಳಿಸಿದರು.
ತಾವು ಈ ಅವಧಿಯಲ್ಲಿ ಹತ್ತಕ್ಕೂ ಹೆಚ್ಚು ಜಿಲ್ಲೆಗಳ ಹಲವಾರು ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೋಷಕರು ಮತ್ತು ಶಾಲಾಡಳಿತ ಮಂಡಳಿಗಳು ಎಲ್ಲ ತರಗತಿಗಳನ್ನು ಆರಂಭಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ನಾವು ಈ ಹಿಂದೆ ತಾಂತ್ರಿಕ ಸಲಹಾ ಸಮಿತಿಯ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧೀನದಲ್ಲಿ ಬರುವ ಯಾವುದೇ ಶಾಲೆಯಿಂದ ಕೋವಿಡ್ ಸೋಂಕು ಹರಡುವಿಕೆ ವರದಿಯಾಗಿಲ್ಲ ಎಂದು ಸಚಿವರು ತಿಳಿಸಿದರು.
ಮಕ್ಕಳು ಭೌತಿಕವಾಗಿ ಶಾಲೆಗಳಲ್ಲಿ ಹಾಜರಾಗುತ್ತಿರುವ ಕಾರಣ ಕಲಿಕಾ ಆಸಕ್ತಿ ಹೆಚ್ಚಿದೆ. ಬೋಧನೆ ಪರಿಣಾಮಕಾರಿಯಾಗುತ್ತಿದೆ. ಶಾಲೆ ಆರಂಭವಾದ ಮೇಲೆ ಮಕ್ಕಳಿಗಾಗಲೀ ಇಲ್ಲವೇ ಶಿಕ್ಷಕರಿಗಾಗಲಿ ಯಾವುದೇ ಸೋಂಕು ಹರಡಿಲ್ಲ ಎಂದು ತಿಳಿಸಿದರು.
ಬಾಲ ಕಾರ್ಮಿಕ ಪದ್ಧತಿ ಮತ್ತು ಬಾಲ ವಿವಾಹಗಳಂತಹ ಸಾಮಾಜಿಕ ಪಿಡುಗುಗಳ ಕುರಿತೂ ನಾವು ಎಚ್ಚರ ವಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಎಲ್ಲ ತರಗತಿಗಳನ್ನು ಆರಂಭಿಸಬೇಕೆಂಬುದು ಸಾರ್ವಜನಿಕ ವಲಯದ ಒತ್ತಾಯವಾಗಿದೆ ಎಂದು ಸಚಿವರು ತಿಳಿಸಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸಿಎಂ ಜೊತೆ ಚರ್ಚಿಸಿ ಶುಲ್ಕ ನಿಗದಿ
ಶಾಲಾ ಶುಲ್ಕ ನಿಗದಿ ಕುರಿತಂತೆ ಹಲವು ಸುತ್ತಿನ ಚರ್ಚೆಗಳು ನಡೆದಿದ್ದು, ಅಂತಿಮವಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದು ಸುರೇಶ್ ಕುಮಾರ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel