ADVERTISEMENT
Wednesday, September 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಳಪೆ, ಸುಳ್ಳಿನ ಕಂತೆ: ತಮ್ಮ ಸರ್ಕಾರದ ಸಾಧನೆ ರಾಜ್ಯಪಾಲರ ಭಾಷಣದಲ್ಲಿದೆ ಎಂದು ಸಿದ್ದು ವ್ಯಂಗ್ಯ..!

Kariyappa N by Kariyappa N
January 29, 2021
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣ ಸುಳ್ಳಿನ ಕಂತೆ. ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕಳಪೆ ಭಾಷಣವನ್ನು ಕೇಳಿರಲಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟೀಕಿಸಿದ್ದಾರೆ.

siddaraiah
ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಹೀಗಾಗಿ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸರ್ಕಾರದ ಸಾಧನೆಗಳನ್ನು ಹೇಳಿಯೇ ಇಲ್ಲ. ಕೇವಲ ಸುಳ್ಳುಗಳ ಸರಮಾಲೆಯನ್ನು ಸರ್ಕಾರ ರಾಜ್ಯಪಾಲರ ಮೂಲಕ ಹೇಳಿಸಿದೆ ಎಂದು ಆರೋಪಿಸಿದ್ದಾರೆ.
ಸರ್ಕಾರದ ನಿಲುವು, ಯೋಜನೆಗಳು, ಮುನ್ನೋಟದ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟತೆ ಇರಬೇಕು. ಆದರೆ, ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಆ ಯಾವುದೂ ಇಲ್ಲ. ಇದೊಂದು ಸುಳ್ಳಿನ ಕಂತೆ. ರಾಜ್ಯಪಾಲರ ಮೂಲಕ ಸರ್ಕಾರ ಸುಳ್ಳು ಹೇಳಿಸಿದೆ. ರಾಜ್ಯಪಾಲರು ಹೇಳಿದ ಸರ್ಕಾರದ ಸಾಧನೆಗಳೆಲ್ಲವೂ ನಮ್ಮ ಅವಧಿಯಲ್ಲಿ ಆಗಿರುವಂಥದ್ದು. ಈ ಸರ್ಕಾರದ ನಿರ್ಧಿಷ್ಟ ಸಾಧನೆಗಳು ಏನೂ ಇಲ್ಲ. ರಾಜ್ಯಪಾಲರ ಭಾಷಣದಲ್ಲಿ ಗೊತ್ತು, ಗುರಿ ಎಂಬುದೇ ಇಲ್ಲ.
ಯಾವುದೇ ಸರ್ಕಾರಕ್ಕೆ ಒಂದು ದೂರದೃಷ್ಟಿ ಇರಬೇಕು. ಈ ಸರ್ಕಾರದ ಅವಧಿ ಇನ್ನೂ ಎರಡೂವರೆ ವರ್ಷ ಇದೆ. ಈ ಅವಧಿಯಲ್ಲಿ ನಾವು ಏನು ಮಾಡಲಿದ್ದೇವೆ ಎಂಬುದನ್ನು ಹೇಳಬೇಕಿತ್ತು. ರಾಜ್ಯದ ಹಣಕಾಸು ಪರಿಸ್ಥಿತಿ, ನೀರಾವರಿ ಯೋಜನೆಗಳ ಕುರಿತು ಭಾಷಣದಲ್ಲಿ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದಾರೆ.
ರಾಜ್ಯ ಅಭಿವೃದ್ಧಿಯಲ್ಲಿ ಹತ್ತು ವರ್ಷ ಹಿಂದಕ್ಕೆ ಹೋಗಿದೆ. ಎಲ್ಲದಕ್ಕೂ ಸರ್ಕಾರ ಕೊರೊನಾ ನೆಪ ಹೇಳುತ್ತಿದೆ. ಹಣಕಾಸು ಪರಿಸ್ಥಿತಿ ಹದಗೆಡಲು, ಅಭಿವೃದ್ಧಿ ಕಾರ್ಯ ಕುಂಠಿತಗೊಳ್ಳಲು, ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆ ಮಾಡದಿರಲು ಕೊರೊನಾ ಕಾರಣ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ.
ಬಿಜೆಪಿ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗಿದೆ. ಈ ಅವಧಿಯಲ್ಲಿನ ಯೋಜನೆ, ಕಾರ್ಯಕ್ರಮಗಳು, ಮುನ್ನೋಟ, ದೂರದೃಷ್ಟಿ ಏನು ಎಂಬುದರ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಏನೂ ಹೇಳಿಲ್ಲ. ಕಾರಣ, ಸರ್ಕಾರದ ಸಾಧನೆ ಶೂನ್ಯ. ಇದು ಸತ್ಯಕ್ಕೆ ದೂರವಾದ ಭಾಷಣ ಎಂದು ಟೀಕಿಸಿದ್ದಾರೆ.

Related posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

September 30, 2026
ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

September 30, 2026

ಉತ್ತರ ಕರ್ನಾಟಕದ ಜನರಿಗೆ ದ್ರೋಹ
ಉತ್ತರ ಕರ್ನಾಟಕದ ಬಗ್ಗೆ ಬಿಜೆಪಿಯವರು ಬಹಳ ಮಾತನಾಡುತ್ತಾರೆ. ಉತ್ತರ ಕರ್ನಾಟಕಕ್ಕೆ ಬಹಳ ಅನ್ಯಾಯವಾಗಿದೆ ಎಂದು ಸಚಿವರಾದ ಉಮೇಶ್ ಕತ್ತಿಯವರೇ ಆಗಾಗ ಹೇಳುತ್ತಿದ್ದರು. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಬೆಳಗಾವಿಯಲ್ಲಿ ಸುವರ್ಣ ಸೌಧ ಕಟ್ಟಿಸಿದ್ದು ಏಕೆ ? ಈ ಸರ್ಕಾರ ಇದುವರೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಿಲ್ಲ. ಜಂಟಿ ಅಧಿವೇಶನವನ್ನೇ ಬೆಳಗಾವಿಯಲ್ಲಿ ಕರೆಯಬೇಕಿತ್ತು. ಹೀಗಿರುವಾಗ ಉತ್ತರ ಕರ್ನಾಟಕದ ಜನತೆಗೆ ಯಾವ ರೀತಿ ಇವರು ಮುಖ ತೋರಿಸುತ್ತಾರೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.


ನಮ್ಮ ಅವಧಿಯಲ್ಲಿ ಪ್ರತಿ ವರ್ಷವೂ ಅಲ್ಲಿ ಹತ್ತು ದಿನಗಳ ಕಾಲ ಅಧಿವೇಶನ ನಡೆಸಿದ್ದೇವೆ. ಸುವರ್ಣಸೌಧ ಕಟ್ಟಿಸಿದ ಉದ್ದೇಶವಾದರೂ ಏನು ? ಸರ್ಕಾರಿ ಕಚೇರಿಗಳನ್ನು ಅಲ್ಲಿಗೆ ಸ್ಥಳಾಂತರ ಮಾಡುತ್ತೇವೆ. ಉತ್ತರ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದವರು ಈಗ ಅಧಿವೇಶನ ನಡೆಸಲು ತಯಾರಿಲ್ಲ. ಇದು ಉತ್ತರ ಕರ್ನಾಟಕದ ಜನತೆಗೆ ಮಾಡಿರುವ ದ್ರೋಹ. ಹೀಗಾಗಿ ರಾಜ್ಯಪಾಲರ ಭಾಷಣದ ಸಂದರ್ಭದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದೇವೆ. ವರ್ಷಕ್ಕೆ ಒಮ್ಮೆಯಾದರೂ ಬೆಳಗಾವಿಯಲ್ಲಿ ಅಧಿವೇಶನ ನಡೆಯಲೇಬೇಕು. ಇದು ನಮ್ಮ ಆಗ್ರಹ.

ಮಹಾ ಸಿಎಂ ಉದ್ಧಟತನ ಸಹಿಸುವುದಿಲ್ಲ
ಮಹಾರಾಷ್ಟ್ರ ಸಿಎಂ ಉದ್ಘಟತನ ಪ್ರದರ್ಶನ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಅವರು ಜವಾಬ್ದಾರಿಯಿಂದ ಮಾತನಾಡಬೇಕು. ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ನಮಗೆ ಬೆಳಗಾವಿ ಕರ್ನಾಟಕದ ಭಾಗ. ಆ ಕುರಿತು ಯಾವುದೇ ವಿವಾದವೇ ಇಲ್ಲ. ಬೆಳಗಾವಿ ನಮ್ಮದು ಎಂಬುದು ಈಗಾಗಲೇ ತೀರ್ಮಾನವಾಗಿದೆ. ಅವರ ಉಳಿವಿಗೆ, ರಾಜಕೀಯ ಕಾರಣಕ್ಕೆ ಪದೇ ಪದೇ ಮಹಾರಾಷ್ಟ್ರ ಸಿಎಂ ಈ ವಿಷಯ ಕೆಣಕುತ್ತಾರೆ. ಇದು ಖಂಡನೀಯ. ಮಹಾರಾಷ್ಟ್ರ ಸಿಎಂ ಅವರ ಉದ್ಧಟನತ ವರ್ತನೆಯನ್ನು ಕನ್ನಡಿಗರು ಸಹಿಸುವುದಿಲ್ಲ.
ವಿಶ್ವನಾಥ್ ಅವರು ಮಂತ್ರಿಯಾಗಲು ಅನರ್ಹ ಎಂದು ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ನ್ಯಾಯಾಲಯ ಕಾನೂನು, ಸಂವಿಧಾನದ ವಿಧಿ ವಿಧಾನ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B S YADIYURAPPAGovernorJoint sessionSiddaramaiahvajubai wala
ShareTweetSendShare
Join us on:

Related Posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

by Shwetha
September 30, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ವಾಗ್ಯುದ್ಧ ಈಗ ತಾರಕಕ್ಕೇರಿದ್ದು, ಪರಸ್ಪರ ವೈಯಕ್ತಿಕ ನಿಂದನೆ ಮತ್ತು ಗಂಭೀರ ಆರೋಪಗಳ ಸುರಿಮಳೆಯೇ ನಡೆಯುತ್ತಿದೆ. ಕೆಪಿಸಿಸಿ...

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

by Shwetha
September 30, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಈಗ ಸ್ವಪಕ್ಷೀಯರಿಂದಲೇ ಭಾರಿ ವಿರೋಧ ವ್ಯಕ್ತವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್...

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

by Shwetha
September 30, 2026
0

ಮೈಸೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೈಸೂರಿನಲ್ಲಿ ಭಾರಿ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಸಿಎಂ ಡಿಕೆಶಿ ಆಸ್ತಿ ವಿವರ ಬಿಡುಗಡೆ ಮಾಡಿದ ಎಚ್.ಡಿ. ಕುಮಾರಸ್ವಾಮಿ

by Shwetha
September 30, 2026
0

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಸ್ತಿ ವಿವರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿ, ನೈಸ್‌ (NICE)...

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

by Shwetha
September 30, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram