ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ ನಾಲ್ಕು ಕೊರೊನಾ ವೈರಸ್ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 128 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಇಂದು ಸೋಂಕು ದೃಢಪಟ್ಟ ಪ್ರಕರಣಗಳ ವಿವರ…
ಪ್ರಕರಣ 125: ಬಾಗಲಕೋಟೆಯ 75 ವರ್ಷದ ಪುರುಷ.ಬಾಗಲಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ 126: ಬೆಳಗಾವಿಯ 70 ವರ್ಷದ ಪುರುಷ. ದೆಹಲಿಯಲ್ಲಿ ಮಾರ್ಚ್ 13ರಿಂದ 18ರವರೆಗೆ ನಡೆದ ತಬ್ಲೀಗಿ ಸಮಾವೇಶದಲ್ಲಿ ಭಾಗವಹಿಸಿದ್ದರು.
ಪ್ರಕರಣ 127: ಬೆಳಗಾವಿಯ 26 ವರ್ಷದ ಪುರುಷ. ದೆಹಲಿಯ ತಬ್ಲೀಗಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ 128: ಬೆಳಗಾವಿಯ 20 ವರ್ಷದ ಪುರುಷ. ದೆಹಲಿಯ ತಬ್ಲೀಗಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಇಲ್ಲಿವರೆಗೆ ರಾಜ್ಯದಲ್ಲಿ 11 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ ಮತ್ತು 3 ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ.








