ಕಂದಮ್ಮಗಳ ಪ್ರಾಣದ ಜೊತೆ ಚೆಲ್ಲಾಟ: ಪೋಲಿಯೋ ಡ್ರಾಪ್ಸ್ ಬದಲು ಸ್ಯಾನಿಟೈಸರ್..!
ಆರೋಗ್ಯ ಸಿಬ್ಬಂದಿಯ ಬೇಜವಾಬ್ದಾರಿತನ ನಿರ್ಲಕ್ಷ್ಯ 12 ಕಂದಮ್ಮಗಳ ಪ್ರಾಣಕ್ಕೆ ಕುತ್ತು ತಂದಿದೆ. ಆರೋಗ್ಯ ಸಿಬ್ಬಂದಿ ಮಾಡಿದ ಎಡವಟ್ಟಿನಿಂದಾಗಿ ಮಕ್ಕಳು ಪ್ರಾಣವನ್ನೇ ಕಳೆದುಕೊಳ್ಳುವ ಭೀತಿ ಸೃಷ್ಟಿಯಾಗಿತ್ತು. ಹೌದು ಮಹಾರಾಷ್ಟ್ರದ ಯವತ್ಮಲ್ಮ ಜಿಲ್ಲೆಯ ಕ್ಯಾಪ್ಸಿಕೊಪ್ರಿಯಲ್ಲಿ ಇಂತಹದೊಂದು ಘಟನೆ ನಡೆದಿದ್ದು, ಆರೋಗ್ಯ ಸಿಬ್ಬಂದಿ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.
`ಸೀತೆಯ ನೇಪಾಳ, ರಾವಣನ ಲಂಕಾಗಿಂತಲೂ ರಾಮನ ಭಾರತದಲ್ಲಿ ತೈಲ ಬೆಲೆ ಹೆಚ್ಚು’
ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ವೇಳೆ, ಆರೋಗ್ಯ ಸಿಬ್ಬಂದಿ 12 ಮಕ್ಕಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್ ನೀಡಿದ್ದಾರೆ. ಇದ್ರಿಂದಾಗಿ ಮಕ್ಕಳು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಗ್ತಿದೆ. ಅದೃಷ್ಟವಶಾತ್ ಮಕ್ಕಳ ಪ್ರಾಣಕ್ಕೆ ಯಾವುದೇ ರೀತಿಯ ಅಪಾಯವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಓರ್ವ ಆರೋಗ್ಯ ಸಿಬ್ಬಂದಿ, ಓರ್ವ ವೈದ್ಯ ಹಾಗೂ ಆಶಾ ಕಾರ್ಯಕರ್ತೆಯನ್ನು ಅಮಾನತು ಮಾಡಲಾಗಿದೆ. ಯಾವತ್ಮಲ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಪೋಲಿಯೋ ಲಸಿಕಾ ಅಭಿಯಾನದ ವೇಳೆ, ಈ ಘಟನೆ ನಡೆದಿದೆ. ಡ್ರಾಪ್ಸ್ ಪಡೆದ ಮಕ್ಕಳನ್ನು ಪಾಲಕರು ಮನೆಗೆ ಕರೆದುಕೊಂಡು ಹೋದ ತಕ್ಷಣ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದೆ. ಆತಂಕಗೊಂಡ ಪಾಲಕರು ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಿದಾಗ ಈ ವಿಚಾರ ಗೊತ್ತಾಗಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳು ಎಲ್ಲರೂ 5 ವರ್ಷ ಒಳಗಿನವರು ಎಂಬುದು ತಿಳಿದುಬಂದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








