ನವದೆಹಲಿ: ದೇಶದಲ್ಲಿ ಲಾಕ್ ಡೌನ್ ಹೊರತಾಗಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೂರು ಸಾವಿರದ ಗಡಿ ಸಮೀಪಿಸ್ತಿದೆ. ನಿನ್ನೆ ರಾತ್ರಿ 2,653ರಷ್ಟಿದ್ದ ಸೋಂಕಿತರ ಸಂಖ್ಯೆ ಈಗ 2902ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ವೆಬ್ಸೈಟ್ನಲ್ಲಿ ಮಾಹಿತಿ ನೀಡಿದೆ.
ಈ ಸೋಂಕಿತ ಪ್ರಕರಣ ಪೈಕಿ 2650 ಕೇಸ್ಗಳು ಆಕ್ಟೀವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದಾರೆ. ಇನ್ನು ಈವರೆಗೆ 183 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 68 ಮಂದಿ ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದೆರಡು ದಿನಗಳಿಂದ ದೇಶದಲ್ಲಿ ದೆಹಲಿಯ ತಬ್ಲಿಘಿ ಜಮಾತ್ನಲ್ಲಿ ಭಾಗಿಯಾಗಿದ್ದ 650ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ.








