ಮಾಜಿ ಹಿರಿಯ ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ನಿಧನ
ಬೆಂಗಳೂರು, ಫೆಬ್ರವರಿ04: ಮಾಜಿ ಹಿರಿಯ ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಫೆಬ್ರವರಿ 03 ಬುಧವಾರ ನಿಧನ ಹೊಂದಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಆರ್ ಪಿ ಶರ್ಮಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ರಾಜ್ಯ ಪೊಲೀಸ್ ವಸತಿ ನಿಗಮದ ಪೊಲೀಸ್ ಮಹಾನಿರ್ದೇಶಕರಾಗಿ ಕೂಡ ಸೇವೆ ಸಲ್ಲಿಸಿದ್ದ ಆರ್ ಪಿ ಶರ್ಮಾ ಬಿಬಿಎಂಪಿ ವ್ಯಾಪ್ತಿಯಲ್ಲಿ ಒತ್ತುವರಿ ತೆರವುಗೊಳಿಸಲು ಹಲವು ಕಠಿಣ ನಿರ್ಧಾರಗಳನ್ನು ಕೈಗೊಂಡು ಜನಪ್ರಿಯರಾಗಿದ್ದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಕೂಡ ಇವರ ಹೆಸರು ಕೇಳಿ ಬಂದಿತ್ತು ಎಂದು ಹೇಳಲಾಗಿದೆ.
ಮಂಗಳೂರು : ಖಾಸಗಿ ಕಾಲೇಜಿನ 40 ವಿದ್ಯಾರ್ಥಿಗಳಿಗೆ ಕೋವಿಡ್-19 – ನರ್ಸಿಂಗ್ ಕಾಲೇಜು ಸೀಲ್ ಡೌನ್
ಈ ಹಿಂದೆ ಗನ್ ಕ್ಲೀನ್ ಮಾಡುವಾಗ ಆಕಸ್ಮಿಕವಾಗಿ ಹಾರಿದ ಗುಂಡಿನಿಂದ ಗಾಯಗೊಂಡಿದ್ದ ಅವರನ್ನು ಬಳಿಕ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಪಡೆದು ಚೇತರಿಕೆ ಕಂಡ ಬಳಿಕ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಶರ್ಮಾ ಬಳಿಕ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು.

ಕಳೆದ ಡಿಸೆಂಬರ್ ನಲ್ಲಿ ನಿವೃತ್ತರಾಗಿದ್ದ ಶರ್ಮಾ ಪತ್ನಿ ಹಿರಿಯ ಐಎಎಸ್ ಅಧಿಕಾರಿ ನಾಗಲಾಂಬಿಕ ದೇವಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1356996556046491650?s=19
https://twitter.com/SaakshaTv/status/1356996818500874241?s=19








