ದೆಹಲಿ: ಕೊರೊನಾ ಹೊಡೆತಕ್ಕೆ ದೇಶ ತತ್ತರಿಸುತ್ತಿದ್ದು, ಕೊರೊನಾ ಬಿಕ್ಕಟ್ಟು ಎದುರಿಸಲು ಕಷ್ಟಪಡುತ್ತಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಿದೆ. ಕೇಂದ್ರ ಹಣಕಾಸು ಇಲಾಖೆ 14 ರಾಜ್ಯಗಳಿಗೆ 17,287.08 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ. ಈ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದು, 15ನೇ ಹಣಕಾಸು ಸಲಹೆಯಂತೆ ಆದಾಯ ಕೊರತೆ ಅನುದಾನದಡಿ, 6,195.08 ಕೋಟಿ ರೂಪಾಯಿ ಹಣವನ್ನ, ಆಂಧ್ರಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಕೇರಳ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಂಜಾಬ್, ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳಕ್ಕೆ ಬಿಡುಗಡೆ ಮಾಡಲಾಗಿದೆ. ಇನ್ನುಳಿದ 11,092 ಕೋಟಿ ರೂಪಾಯಿಗಳನ್ನ ಎಲ್ಲಾ ರಾಜ್ಯಗಳಿಗೆ ರಾಜ್ಯ ವಿಪತ್ತು ನಿರ್ವಹಣೆ ಯೋಜನೆಯಡಿ ಕೇಂದ್ರ ಸರ್ಕಾರದ ಮೊದಲನೇ ಕಂತಿನ ಹಣವಾಗಿ ಫಂಡ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








