ಹಿಂದು ವಿರೋಧಿ ಹೇಳಿಕೆ.. ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ
ಮೈಸೂರು : ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆಗಳನ್ನ ನೀಡಿ ಚರ್ಚೆಗೆ ಗ್ರಾಸವಾಗುತ್ತಿದ್ದ ಸಾಹಿತಿ ಕೆ.ಎಸ್. ಭಗವಾನ್ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಅವರು ಮಸಿ ಬಳಿದಿದ್ದಾರೆ.
ಹಿಂದೂ ವಿರೋಧಿ ಹೇಳಿಕೆ ಮೇಲೆ ಭಗವಾನ್ ವಿರುದ್ಧ ವಕೀಲೆ ದೂರು ದಾಖಲಿಸಿದ್ದರು.
ಈ ಹಿನ್ನೆಲೆ ಇಂದು ಭಗವಾನ್ ಅವರು 2ನೇ ಎಸಿಎಂಎಂ ನ್ಯಾಯಾಲಯಕ್ಕೆ ಆಗಮಿಸಿದ್ದರು.
ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇದಾದ ಬಳಿಕ ಭಗವಾನ್ ಅವರು ಕೋರ್ಟ್ ನಿಂದ ಹೊರಗೆ ಬಂದಾಗ ಮೀರಾ ರಾಘವೇಂದ್ರ ಅವರು ಮುಖಕ್ಕೆ ಮಸಿ ಬಳಿದಿದ್ದಾರೆ.
ಹಿಂದು ಧರ್ಮ ಧರ್ಮವೇ ಅಲ್ಲ. ಹಿಂದು ಎಂಬ ಶಬ್ದ ಅವಮಾನಕರ ಎಂದು ಸಾಹಿತಿ . ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









