ಮಂಗಳೂರಿನ 49 ವಿದ್ಯಾರ್ಥಿಗಳಿಗೆ ಕೋವಿಡ್-19: ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ – ಕರ್ನಾಟಕ ಆರೋಗ್ಯ ಇಲಾಖೆ
ಮಂಗಳೂರು, ಫೆಬ್ರವರಿ05: ಮಂಗಳೂರಿನ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳದ 49 ವಿದ್ಯಾರ್ಥಿಗಳಿಗೆ ಕೋವಿಡ್ -19 ಧೃಡ ಪಟ್ಟ ನಂತರ ಕರ್ನಾಟಕ ಆರೋಗ್ಯ ಇಲಾಖೆ ಅಧಿಕಾರಿಗಳು ಜನರನ್ನು ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಮಂಗಳೂರು ಬಳಿಯ ಉಳ್ಳಾಲದಲ್ಲಿರುವ ನರ್ಸಿಂಗ್ ಕಾಲೇಜಿನಲ್ಲಿ 49 ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವಾಗ ಸೋಂಕು ದೃಢಪಟ್ಟಿರುವ ಸುದ್ದಿ ಕೋವಿಡ್ ವೈರಸ್ ಎಷ್ಟು ಅನಿರೀಕ್ಷಿತವಾಗಿದೆ ಎಂಬುದರ ಘೋರ ಜ್ಞಾಪನೆಯಾಗಿದೆ. ಕೋವಿಡ್ ನ ಬಗ್ಗೆ ಇನ್ನೂ ಜಾಗರೂಕತೆಯಿಂದ ಇರುವುದು ಅವಶ್ಯಕವಾಗಿದ್ದು, ದಯವಿಟ್ಟು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಕೆ ಗುರುವಾರದಂದು ಟ್ವೀಟ್ ಮಾಡಿದ್ದಾರೆ .
ನಟಿ ರಾಧಿಕಾ ಕುಮಾರಸ್ವಾಮಿಗೆ ಮತ್ತೊಮ್ಮೆ ಸಂಕಷ್ಟ ?
ದಕ್ಷಿಣ ಕನ್ನಡ ಜಿಲ್ಲೆಯ ಆಲಿಯಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಅನ್ನು ಅಧಿಕಾರಿಗಳು ಬುಧವಾರ ಸೀಲ್ ಡೌನ್ ಮಾಡಿದ್ದಾರೆ.
ಒಂದು ತಿಂಗಳ ಅವಧಿಯ ವಿರಾಮದ ನಂತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ 104 ಮಾದರಿಗಳನ್ನು ಪರೀಕ್ಷಿಸಲಾಯಿತು. ಈ ಪೈಕಿ 49 ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ನೋಡಲ್ ಅಧಿಕಾರಿ ಡಾ.ಎಚ್.ಅಶೋಕ್ ತಿಳಿಸಿದ್ದಾರೆ.
ಫೆಬ್ರವರಿ 19 ರವರೆಗೆ ಕಾಲೇಜು ಆವರಣವನ್ನು ಕಂಟೈನ್ಮೆಂಟ್ ವಲಯವನ್ನಾಗಿ ಮಾಡಲಾಗಿದೆ.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಬುಧವಾರ, ಕರ್ನಾಟಕದಲ್ಲಿ 426 ಹೊಸ ಕೋವಿಡ್ -19 ಪ್ರಕರಣಗಳು ಮತ್ತು ಎರಡು ಕೊರೋನಾ ಸಂಬಂಧಿತ ಸಾವುನೋವುಗಳನ್ನು ದಾಖಲಿಸಿದೆ. ಈ ಮೂಲಕ ಒಟ್ಟು ಸೋಂಕಿನ ಸಂಖ್ಯೆ 9,40,596 ಮತ್ತು ಸಾವಿನ ಸಂಖ್ಯೆ 12,225 ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
9,22,437 ಪ್ರಕರಣಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ವರದಿಯಾದ ಪ್ರಕರಣಗಳ ಪಟ್ಟಿಯಲ್ಲಿ ಬೆಂಗಳೂರು ನಗರ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಚಹಾ ಪ್ರಿಯರು ತಿಳಿದುಕೊಂಡಿರಬೇಕಾದ ಅತಿ ಮುಖ್ಯ ಮಾಹಿತಿಗಳು https://t.co/qRjNOVqDe4
— Saaksha TV (@SaakshaTv) February 3, 2021
ನಿಮ್ಮ ಹಣವನ್ನು ದ್ವಿಗುಣಗೊಳಿಸಲು ಇಲ್ಲಿದೆ ಪೋಸ್ಟ್ ಆಫೀಸ್ ನ ಅತ್ಯುತ್ತಮ ಯೋಜನೆhttps://t.co/8E72nNsNpo
— Saaksha TV (@SaakshaTv) February 3, 2021








