ರಾಮನಗರ: ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಕೆಲವು ಸಂದರ್ಭದಲ್ಲಿ ವ್ಯತ್ಯಾಸಗಳಾಗುತ್ತವೆ. ನಮ್ಮ ಪಕ್ಷ ರಾಷ್ಟ್ರಮಟ್ಟದಲ್ಲಿ ಕೆಲವು ನಿಲುವು ತೆಗೆದುಕೊಂಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೊತೆ ಕೈಜೋಡಿಸಲು ನಾವು ಸಿದ್ಧರಿದ್ದೇವೆ. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಎಲ್ಲಾ ಸಹಕಾರ ನೀಡಲಾಗುವುದು. ಪೊಲೀಸರು ಮತ್ತು ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.








