ಕೊರೊನಾ ಪರಿಸ್ಥಿತಿ ಎದುರಿಸಲು ಹಾಗೂ ಅದರ ನಿರ್ವಹಣೆಗೆ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ವಾಗತಿಸಿದ್ದಾರೆ. ಈ ಬಗ್ಗೆ ಮಾದ್ಯಮ ಪ್ರಕಟಣೆ ಹೊರಡಿಸಿದ ಅವರು, ನಾನು ಬಹು ಹಿಂದೆಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ವಪಕ್ಷ ಸಭೆ ಕರೆಯಬೇಕು. ದೇಶ ಎದುರಿಸುತ್ತಿರುವ ಈ ಸಂಕಷ್ಟ ಪರಿಸ್ಥಿತಿ ಎದುರಿಸಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹ ಮಾಡಿದ್ದೆ. ತಡವಾಗಿಯಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ಈ ನಿರ್ಧಾರಕ್ಕೆ ಬಂದಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅರವಿಂದ ಅವೇಂಜರ್ಸ್ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








