ದೆಹಲಿ: ಭಾರತದಲ್ಲಿ ಲಾಕ್ ಡೌನ್ ಹೇರಲಾಗಿದ್ದರೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಸರ್ಕಾರದ ಅಧಿಕೃತ ಪ್ರಕಟಣೆಯಂತೆ ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 3 ಸಾವಿರದ ಗಡಿ ದಾಟಿದೆ. ದೇಶದಲ್ಲಿ ಒಟ್ಟು 3075 ಕೊರೊನಾ ಪಾಸಿಟಿವ್ ಪ್ರಕರಣಗಳು ಧೃಡಪಟ್ಟಿವೆ. ಈ ಕೇಸ್ ಗಳ ಪೈಕಿ 2784 ಪ್ರಕರಣಗಳು ಆಕ್ಟೀವ್ ನಲ್ಲಿದ್ದು, ಒಟ್ಟು 212 ಜನರು ಸೋಂಕಿನಿAದ ಗುಣಮುಖರಾಗಿದ್ದಾರೆ. 75 ಜನರು ಕೊರೊನಾ ಸೋಂಕಿನಿAದ ಮೃತಪಟ್ಟಿದ್ದಾರೆ.
ಮಹಾರಾಷ್ಟçದಲ್ಲಿ ಅತಿ ಹೆಚ್ಚು ಪ್ರಕರಣಗಳು!!!
ದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿರುವುದು ಮಹಾರಾಷ್ಟ್ರದಲ್ಲಿ. ಅಲ್ಲಿ ಒಟ್ಟು 490 ಕೇಸ್ ಪತ್ತೆಯಾಗಿದೆ. ಇವರಲ್ಲಿ 24 ಜನರು ಸಾವನ್ನಪ್ಪಿದ್ದಾರೆ. ಇನ್ನು, ಎರಡನೇ ಸ್ಥಾನದಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಇದ್ದು, ಒಟ್ಟು 445 ಕೊರೊನಾ ಪಾಸಿಟಿವ್ ಕೇಸ್ ಗಳು ದಾಖಲಾಗಿವೆ. ಇನ್ನು ತಬ್ಲಿಘಿ ಜಮಾತ್ ಸಭೆಯ ಬಳಿಕ ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ ಕಾಣ್ತಿದ್ದು, ಇದುವರೆಗೂ ಒಟ್ಟು 411 ಪಾಸಿಟಿವ್ ಪ್ರಕರಣದೊಂದಿಗೆ ಅತಿಹೆಚ್ಚು ಕೊರೊನಾ ಪ್ರಕರಣ ದಾಖಲಾದ ರಾಜ್ಯಗಳ ಲಿಸ್ಟ್ ನಲ್ಲಿ ಮೂರನೇ ಸ್ಥಾನದಲ್ಲಿದೆ. ಅತಿಹೆಚ್ಚು ಕೊರೊನಾ ಪ್ರಕರಣ ದಾಖಲಾದ ರಾಜ್ಯಗಳ ಲಿಸ್ಟ್ ನಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿದೆ.








