ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾವ್ ಅವರ 113 ನೇ ಜನ್ಮ ದಿನಾಚರಣೆ ಆಚರಿಸಲಾಯಿತು.ಸಿ.ಎಂ ಯಡಿಯೂರಪ್ಪ ಅವರು ವಿಧಾನ ಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಬಾಬು ಜಗಜೀವನ ರಾಮ್ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಪುಷ್ಪ ಅರ್ಪಣೆ ಮಾಡಿದರು. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜನ್ಮ ದಿನಾಚರಣೆ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ
ಡಿಸಿಎಂ ಗೋವಿಂದ ಕಾರಜೋಳ, ಸಚಿವ ಸೋಮಣ್ಣ , ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಕಾರ್ಯಕ್ರಮದ ಬಳಿಕ ಮಾತನಾಡಿದ ಸಿ.ಎಂ ಯಡಿಯೂರಪ್ಪ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ್ ಅವರು ಶೋಷಿತರ ಹಕ್ಕಿಗಾಗಿ ಹೋರಾಡಿದವರು. ಹಸಿರು ಕ್ರಾಂತಿಯ ಹರಿಕಾರ.
ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ರು, ಕೃಷಿ, ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ರು, ಅವರ ಸೇವೆ ಸ್ಮರಣೀಯವಾದದು.ಅವರ ಜೀವನ ಚರಿತ್ರೆ ಯುವ ಪೀಳಿಗೆಗೆ ತಲುಪಿಸುವ ಕಾರ್ಯ ನಡೆಯಬೇಕು. ಇದೆ ವೇಳೆ ಮಾಜಿ ಸಿಎಂ ಕುಮಾರ ಸ್ವಾಮಿ ಸರಣಿ ಟ್ವಿಟ್ ವಿಚಾರದ ಬಗ್ಗೆ ಮಾದ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆ ಯಡಿಯೂರಪ್ಪ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಪ್ರಶ್ನೆ ಕೇಳಿದೊಡನೆ ಪ್ರತಿಕ್ರಿಯೆ ನೀಡದೆ ಹೊರಟರು
ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!
ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....








