ಬೆಂಗಳೂರು : ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಭಾರಿ ಇಳಿಕೆಯಾಗಿದ್ದ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದೆ. ಇದರ ಮಧ್ಯೆ ಇಂದು ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 73.55 ರೂ. ಇದ್ದು, ದೆಹಲಿಯಲ್ಲಿ ಪೆಟ್ರೋಲ್ ದರ 69.59 ರೂ.ಇದೆ. ಚೆನ್ನೈನಲ್ಲಿ 72.28 ರೂ. ಕೋಲ್ಕತ್ತಾದಲ್ಲಿ 73.30 ರೂ. ಹಾಗೂ ವಾಣಿಜ್ಯ ನಗರಿ ಮುಂಬೈನಲ್ಲಿ 76.31 ರೂ. ಇದೆ.
ಡಿಸೇಲ್ ದರ ಸಹ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ ಒಂದು ಲೀಟರ್ ಡೀಸೆಲ್ ದರ 65.96 ರೂ. ಇದ್ದು, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಡಿಸೇಲ್ ದರ 62.29 ರೂ. ಇದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ ಕಚ್ಚಾ ತೈಲ ದರ 2,053 ರೂ. ಇದೆ.








