ಕಾರವಾರ : ಕೊರೊನಾ ವೈರಸ್ ಸೋಂಕು ವಿರುದ್ಧ ಹೋರಾಡಲು ಸಿಎಂ ಪರಿಹಾರ ನಿಧಿಗೆ ರಾಜ್ಯದ ಉದ್ಯಮಿಗಳು, ಸಿನಿಮಾ ತಾರೆಯರು, ಮಠಾಧೀಶರು ದೇಣಿಗೆ ನೀಡುತ್ತಿದ್ದಾರೆ. ಅದರಂತೆ ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಾರವಾರ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 50 ಲಕ್ಷ ರೂ.ಗಳನ್ನು ನೀಡಿದ್ದಾರೆ.
ಈ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಹರಡದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ 20-21 ನೇ ಸಾಲಿನ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 50 ಲಕ್ಷ ರೂ. ಗಳನ್ನು ಪರಿಹಾರ ನಿಧಿ ಬಿಡುಗಡೆ ಮಾಡುವಂತೆ ಡಿಸಿಗೆ ತಿಳಿಸಲಾಗಿದೆ.








