ಮಾರ್ಚ್ ತಿಂಗಳಿನಲ್ಲಿ ವಿಜಯನಗರ ಜಿಲ್ಲೆಗೆ ಡಿಸಿ, ಎಸ್ ಪಿ ನೇಮಕ
ಹೊಸಪೇಟೆ : ರಾಜ್ಯದ ಮೂವತ್ತೊಂದನೇ ಜಿಲ್ಲೆಯಾಗಿ ಉಗಮವಾಗಿರುವ ವಿಜಯನಗರ ಜಿಲ್ಲೆಗೆ ಮಾರ್ಚ್ ತಿಂಗಳಿನಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ನೇಮಕ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
ವಿಜಯನಗರ ಜಿಲ್ಲಾ ಕೇಂದ್ರವಾಗಿರುವ ಹೊಸಪೇಟೆ ನಗರದ ಕರ್ನಾಟಕ ಗೃಹ ಮಂಡಳಿ ಪ್ರದೇಶವನ್ನು ಸ್ವಚ್ಛಗೊಳಿಸಲಾಗುತ್ತಿದ್ದು, ಸ್ಥಳಕ್ಕೆ ಆನಂದ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ಗೃಹ ಮಂಡಳಿಗೆ ಸೇರಿದ್ದ 81 ಎಕರೆಯಲ್ಲಿ 40 ಎಕರೆಯನ್ನು ವಿಜಯನಗರ ಜಿಲ್ಲಾ ಕಚೇರಿಗೆ ನೀಡಲಾಗಿದೆ.
ಮೊದಲು ವಿಶೇಷ ಅಧಿಕಾರಿಗಳು ಬರಲಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ವಿಜಯನಗರ ಜಿಲ್ಲೆಗೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ವಿಜಯನಗರ ಜಿಲ್ಲೆಯ ಆರು ತಾಲೂಕುಗಳು ಹೀಗಿವೆ
ಹೊಸಪೇಟೆ ( ಜಿಲ್ಲಾ ಕೇಂದ್ರ)
ಕೂಡ್ಲಿಗಿ
ಹಗರಿಬೊಮ್ಮನಹಳ್ಳಿ
ಕೊಟ್ಟೂರು
ಹೂವಿನಹಡಗಲಿ
ಹರಪನಹಳ್ಳಿ
ಗಡಿ ಸರಹದ್ದು ಹೀಗಿದೆ
ಪೂರ್ವಕ್ಕೆ ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಿವೆ
ಪಶ್ಚಿಮಕ್ಕೆ ಗದಗ, ಹಾವೇರಿ ಜಿಲ್ಲೆಗಳಿವೆ
ಉತ್ತರಕ್ಕೆ ಕೊಪ್ಪಳ ಜಿಲ್ಲೆಇದೆ
ದಕ್ಷಿಣಕ್ಕೆ ದಾವಣಗೆರೆ ತಾಲೂಕು, ಹರಿಹರ ತಾಲೂಕುಗಳಿವೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel