ರಾಜ್ಯದ ಪ್ರಮುಖ ಸುದ್ದಿಗಳು : ಇತ್ತೀಚೆಗಿನ ಅಪ್ ಡೇಟ್ಸ್..!
ಬಿಎಂಟಿಸಿ ಸಿಬ್ಬಂದಿಗೆ ಭರ್ಜರಿ ಸುದ್ದಿ : ಆನ್ ಲೈನ್ ಮೂಲಕ ರಜೆ
ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಕೆ ಸಂಸ್ಥೆಯು ತನ್ನ ಸಿಬ್ಬಂದಿಗೆ ಭರ್ಜರಿ ಸುದ್ದಿ ನೀಡಿದೆ. ಇನ್ಮುಂದೆ ಲಿಖಿತ ರೂಪದಲ್ಲಿ ಯಾವುದೇ ರಜೆ ಅರ್ಜಿಗಳ ಸ್ವೀಕೃತಿಯನ್ನು ಸಂಸ್ಥೆ ಸ್ಥಗಿತಗೊಳಿಸಿದ್ದು, ಮೊಬೈಲ್ ಮೂಲಕ ಸಿಬ್ಬಂದಿ ರಜೆ ಪಡೆಯುವ ವ್ಯವಸ್ಥೆ ಜಾರಿಗೆ ತಂದಿದೆ. ಆನ್ ಲೈನ್ ಮೂಲಕ ಸಿಬ್ಬಂದಿ ರಜೆ ಪಡೆಯುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಮಾರ್ಗಸೂಚಿನಲ್ಲಿ ಸಂಸ್ಥೆವು ಆನ್ ಲೈನ್ ಎಸ್‍ಎಂಎಸ್ ಮೂಲಕ ವಾರದ ರಜೆ, ಆಯ್ಕೆ ಮಾಡಿದ ಹಬ್ಬದ ರಜೆ, ಮಂಜೂರಾತಿ ದಿನದಂದು ಕರ್ತವ್ಯ ನಿರ್ವಹಿಸಿದಲ್ಲಿ ಪರ್ಯಾಯ ರಜೆಯನ್ನು ಕರ್ತವ್ಯ ನಿರ್ವಹಿಸಿದ 30 ದಿನಗಳೊಳಗಾಗಿ ಕಡ್ಡಾಯವಾಗಿ ಪಡೆಯಬೇಕಾಗಿದೆ. ಸಾಂದರ್ಭಿಕ ರಜೆ, ಇಎಲ್, ಸಿಎಂಎಲ್ ರಜೆಗಳನ್ನು ಒಂದೇ ಬಾರಿ ಪಡೆಯಲು ಅವಕಾಶವಿಲ್ಲ. ಒಂದು ಬಾರಿಗೆ ಆರು ಸಾಂದರ್ಭಿಕ ರಜೆಗಳನ್ನು ಮಾತ್ರ ಪಡೆಯಲು ಅವಕಾಶ ಕಲ್ಪಿಸಿದೆ. ಇಎಲ್ ಮತ್ತು ಸಿಎಂಎಲ್ ರಜೆ ಪಡೆಯುವ ಸಂದರ್ಭದಲ್ಲಿ ವಾರದ ರಜೆ, ಸಿಎಲ್ ಮತ್ತು ಪರ್ಯಾಯ ರಜೆ ಪಡೆಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದೆ.
ಪ್ರೇಮಿಗಳ ದಿನದಂದೇ ಸಪ್ತಪದಿ ತುಳಿದ ಡಿಕೆಶಿ ಪುತ್ರಿ
ಬೆಂಗಳೂರು : ಪ್ರೇಮಿಗಳ ದಿನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಅವರ ಮಗ ಅಮರ್ಥ್ಯ ಹೆಗ್ಡೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಖಾಸಗಿ ಹೋಟೆಲ್ ನಲ್ಲಿ ಐಶ್ವರ್ಯ ಮತ್ತು ಅಮರ್ಥ್ಯ ಸುಬ್ರಹ್ಮಣ್ಯ ಹೆಗ್ಡೆ ವಿವಾಹ ನರವೇರಿದೆ. ಅದ್ದೂರಿಯಾಗಿ ನಡೆದ ಮದುವೆಯಲ್ಲಿ ಶಾಸ್ತ್ರೋಕ್ತವಾಗಿ ಇಬ್ಬರೂ ಸಪ್ತಪದಿ ತುಳಿದಿದ್ದಾರೆ. ಬೆಳಗ್ಗೆ 9 ರಿಂದ 9.45 ರ ನಡುವಿನ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಆಗಿದೆ.
ಮದುವೆಗೆ ಒಟ್ಟು 800 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ತಮ್ಮ ಮಗಳಿಗೆ ಅಮರ್ಥ್ಯ ತಾಳಿ ಕಟ್ಟುತ್ತಿದ್ದಂತೆ ಡಿಕೆ ಶಿವಕುಮಾರ್ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ಭಾವುಕರಾದ ಐಶ್ವರ್ಯ ಕೂಡ ಕಣ್ತುಂಬಿಕೊಂಡಿದ್ದಾರೆ. ಕೆಂಪು ಬಣ್ಣದ ರೇಷ್ಮೆ ಸೀರೆಯುಟ್ಟು, ವಜ್ರಾಭರಣಗಳನ್ನು ತೊಟ್ಟಿದ್ದ ಐಶ್ವರ್ಯ ಮದುಮಗಳಾಗಿ ಮಿಂಚುತ್ತಿದ್ದರು.
ಕಳೆದೊಂದು ವಾರದಿಂದ ಡಿಕೆ ಶಿವಕುಮಾರ್ ಮನೆಯಲ್ಲಿ ಐಶ್ವರ್ಯಾಳ ಮದುವೆ ಸಂಭ್ರಮ ಜೋರಾಗಿತ್ತು. ಮೆಹಂದಿ, ಅರಿಶಿಣ ಶಾಸ್ತ್ರ, ಸಂಗೀತ್ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದಿವೆ.
ಫೆಬ್ರವರಿ 17 ರಂದು ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ ನಲ್ಲಿ ರಿಸೆಪ್ಷನ್ ನಡೆಯಲಿದೆ. ಫೆಬ್ರವರಿ 28ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೀಗರ ಊಟ ನಡೆಯಲಿದೆ.
ಕರ್ನಾಟಕದಲ್ಲೇ ಟೆಸ್ಲಾ ಕಾರು ಉತ್ಪಾದನಾ ಘಟಕ
ಬೆಂಗಳೂರು : ಐಷಾರಾಮಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಟೆಸ್ಲಾ ನಮ್ಮ ರಾಜ್ಯದಲ್ಲಿ ತನ್ನ ಉತ್ಪಾದನಾ ಘಟಕ ತೆರೆಯಲಿದೆ. ಬೆಂಗಳೂರಿನ ಸಮೀಪದ ತುಮಕೂರು ಜಿಲ್ಲೆಯಲ್ಲಿ 7725 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಸ್ಲಾ ಉತ್ಪಾದನಾ ಘಟಕವನ್ನು ತೆರೆಯಲಿದೆ. ಇದರಿಂದ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗವಕಾಶ ಸೃಷ್ಠಿಯಾಗಲಿದೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕೃತ ಮಾಹಿತಿ ನೀಡಿದ್ದು, ಉದ್ಯಮಿ ಎಲಾನ್ ಮಸ್ಕ್ ಮಾಲೀಕತ್ವದ ಟೆಸ್ಲಾ ಕಂಪನಿ ಕರ್ನಾಟಕದಲ್ಲಿ ಉತ್ಪಾದನಾ ಘಟಕ ಸ್ಥಾಪಿಸಿಲಿದೆ ಎಂದು ಪ್ರಕಟಿಸಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ 2021ರ ಮೊದಲಾರ್ಧದಲ್ಲಿ ಭಾರತದ ಕಾರು ಮಾರುಕಟ್ಟೆಗೆ ಟೆಸ್ಲಾ ಕಂಪನಿಯ ಕಾರು ಬರಲಿದೆ ಎಂದು ಡಿಸೆಂಬರ್ ಕೊನೆಯಲ್ಲಿ ತಿಳಿಸಿದ್ದರು. ಈ ಹೇಳಿಕೆ ಬೆನ್ನಲ್ಲೆ ಟೆಸ್ಲಾ ಎಲ್ಲಿ ತನ್ನ ಘಟಕ ತೆರೆಯುತ್ತೆ ಅನ್ನೋ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು. ಈ ಮಧ್ಯೆ ಕರ್ನಾಟಕದಲ್ಲಿ ಟೆಸ್ಲಾ ತನ್ನ ಕಂಪನಿ ತೆರೆಯಲಿದೆ ಅನ್ನೋ ಸುದ್ದಿ ಭಾರಿ ಸದ್ದು ಮಾಡಿತ್ತು. ನಮ್ಮ ರಾಜ್ಯ ಸರ್ಕಾರ ಕೂಡ ಉದ್ಯಮ ಸ್ಥಾಪನೆಗೆ ನೆರವಾಗಲು ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುವುದಾಗಿ ತಿಳಿಸಿತ್ತು. ಅದರಂತೆ ಟೆಸ್ಲಾ ಕಂಪನಿಗೆ ಘಟಕ ಸ್ಥಾಪಿಸಲು ಬೆಂಗಳೂರು, ತುಮಕೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಜಾಗ ನೀಡುವ ಪ್ರಸ್ತಾಪ ಸಲ್ಲಿಸಿತ್ತು.
ಹಳೆಬೀಡಿನಲ್ಲಿ ಬೆಂಕಿ : ಹಲವು ವಿಗ್ರಹಗಳಿಗೆ ಹಾನಿ
ಹಾಸನ : ಹಳೆಬೀಡಿನ ಹೊಯ್ಸಳೇಶ್ವರ ದೇಗುಲದ ಆವರಣದಲ್ಲಿ ಒಣಗಿದ್ದ ಗಿಡಗಳಿಗೆ ಬೆಂಕಿ ಹಚ್ಚುವಾಗ ಕಾರ್ಮಿಕರ ಅಚಾತುರ್ಯ ದಿಂದಾಗಿ ಹಲವು ಅತ್ಯಮೂಲ್ಯ ವಿಗ್ರಹಗಳು ವಿಗ್ರಹಗಳಿಗೆ ಹಾನಿಯಾಗಿದೆ.
ಹೊಯ್ಸಳೇಶ್ವರ ಆವರಣದಲ್ಲಿ ಸ್ಮಾರಕದ ಸುತ್ತ ಅನುಪಯುಕ್ತ ಗಿಡಗಳು ಬೆಳೆದಿದ್ದವು. ಅವುಗಳನ್ನು ಸ್ವಚ್ಛಗೊಳಿಸುವ ಕೆಲಸವನ್ನು ಸುಲಭ ಮಾಡಿಕೊಳ್ಳಲು ಒಣಗಿದ್ದ ಗಿಡಗಳಿಗೆ ಬೆಂಕಿ ಹಚ್ಚಲಾಗಿದೆ.
ಈ ವೇಳೆ ಅತ್ಯಮೂಲ್ಯ ವಿಗ್ರಹಗಳು ಸುಟ್ಟು ಮಸಿ ಹಿಡಿದು ಮೂಲ ರೂಪ ಕಳೆದುಕೊಂಡಿವೆ.
ಭಾರತೀಯ ಪುರಾತತ್ವ ಕಾರ್ಮಿಕರು ಈ ಅಚಾತುರ್ಯವನ್ನ ಎಸಗಿದ್ದಾರೆ. ಇವರು ಒಣಗಿದ್ದ ಗಿಡಗಳಿಗೆ ಬೆಂಕಿ ಇಡುತ್ತಿದ್ದಂತೆ ಧಗಧನಗೆ ಹೊತ್ತಿಕೊಂಡು ಬೆಂಕಿ ಉರಿದಿದ್ದು, ಕೆರೆ ದಂಡೆಯಲ್ಲಿದ್ದ ಹುಚ್ಚೇಶ್ವರ ಸ್ಮಾರಕದ ಬಹುಭಾಗ ಬೆಂಕಿಯಲ್ಲಿ ಸಿಲುಕಿ ಕರಕಲಾಗಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮಾರ್ಚ್ ತಿಂಗಳಿನಲ್ಲಿ ವಿಜಯನಗರ ಜಿಲ್ಲೆಗೆ ಡಿಸಿ, ಎಸ್ ಪಿ ನೇಮಕ
ಹೊಸಪೇಟೆ : ರಾಜ್ಯದ ಮೂವತ್ತೊಂದನೇ ಜಿಲ್ಲೆಯಾಗಿ ಉಗಮವಾಗಿರುವ ವಿಜಯನಗರ ಜಿಲ್ಲೆಗೆ ಮಾರ್ಚ್ ತಿಂಗಳಿನಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ನೇಮಕ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
ವಿಜಯನಗರ ಜಿಲ್ಲಾ ಕೇಂದ್ರವಾಗಿರುವ ಹೊಸಪೇಟೆ ನಗರದ ಕರ್ನಾಟಕ ಗೃಹ ಮಂಡಳಿ ಪ್ರದೇಶವನ್ನು ಸ್ವಚ್ಛಗೊಳಿಸಲಾಗುತ್ತಿದ್ದು, ಸ್ಥಳಕ್ಕೆ ಆನಂದ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ಗೃಹ ಮಂಡಳಿಗೆ ಸೇರಿದ್ದ 81 ಎಕರೆಯಲ್ಲಿ 40 ಎಕರೆಯನ್ನು ವಿಜಯನಗರ ಜಿಲ್ಲಾ ಕಚೇರಿಗೆ ನೀಡಲಾಗಿದೆ.
ಮೊದಲು ವಿಶೇಷ ಅಧಿಕಾರಿಗಳು ಬರಲಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ವಿಜಯನಗರ ಜಿಲ್ಲೆಗೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಹಾವೇರಿ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ
ಹಾವೇರಿ : ಶಾರ್ಟ್ ಸರ್ಕ್ಯೂಟ್ ಆಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ ಲಕ್ಷಾಂತರ ರುಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೂಸನೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚಂದ್ರಪ್ಪ ಬೂದಿಹಳ್ಳಿ ಮತ್ತು ನಿಂಗಪ್ಪ ಬೂದಿಹಳ್ಳಿ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಮನೆಯಲ್ಲಿದ್ದ ಲಕ್ಷಾಂತರ ರುಪಾಯಿ ಮೌಲ್ಯದ ವಸ್ತುಗಳು ಹಾಗೂ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಹಾನಿಯಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








