ನವದೆಹಲಿ: ಲಾಕ್ ಡೌನ್ ಹೊರತಾಗಿಯೂ ದೇಶದಲ್ಲಿ ಕೊರೊನಾ ಸೋಂಕಿತ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕೇವಲ 12 ಗಂಟೆಯಲ್ಲಿ 490 ಕೊರೊನಾ ಕೇಸ್ ದೃಢಪಟ್ಟಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 12 ಗಂಟೆಯಲ್ಲಿ 490 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4067ಕ್ಕೆ ಏರಿದೆ. ಇನ್ನು ಕೊರೊನಾಸುರನಿಗೆ ಈವರೆಗೂ ದೇಶಾದ್ಯಂತ 109 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. 292 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.








