ಮಧ್ಯಮ ವರ್ಗದವರಿಗೆ ರಾಜ್ಯ ಸರ್ಕಾರ ಶಾಕ್
ಬೆಳಗಾವಿ : ಕೊರೊನಾ ಕಾಟ… ಬೆಲೆ ಏರಿಕೆ ಸಂಕಷ್ಟದ ಮಧ್ಯೆ ತತ್ತರಿಸಿ ಹೋಗಿರುವ ಬಡ ಮತ್ತು ಕೆಳ ಮಧ್ಯಮ ವರ್ಗದವರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಐದು ಎಕರೆಗಿಂತ ಹಿಚ್ಚು ಜಮೀನು, ಟಿವಿ, ಬೈಕ್, ಫ್ರಿಡ್ಜ್ ಇದ್ದರೇ ಅವರ ಬಿಪಿಎಲ್ ಚೀಟಿಯನ್ನ ರದ್ದುಗೊಳಿಸಲು ಚಿಂತನೆ ನಡೆಸಿದೆ.
ಬೆಳಗಾವಿಯಲ್ಲಿ ಈ ಕುರಿತಂತೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ಮನೆಯಲ್ಲಿ ಫ್ರಿಡ್ಜ್, ಬೈಕ್, ಟಿವಿ, ಐದು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು. ಇವರು ತಮ್ಮ ಬಿಪಿಎಲ್ ಕಾರ್ಡ್‍ಗಳನ್ನ ಮಾರ್ಚ್ ಅಂತ್ಯದೊಳಗೆ ಹಿಂದಿರುಗಿಸಬೇಕೆ ಎಂದು ತಿಳಿಸಿದ್ದಾರೆ.
ಇದಲ್ಲದೆ ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಮತ್ತು ವಾರ್ಷಿಕ 1.20 ಲಕ್ಷ ರೂಗಿಂತ ಅಧಿಕ ವರಮಾನ ಹೊಂದಿರುವವರ ಬಿಪಿಎಲ್ ಕಾರ್ಡ್ ಕೂಡ ಕ್ಯಾನ್ಸಲ್ ಆಗಲಿದೆ. ಅವುಗಳನ್ನು ಮಾರ್ಚ್ 31ರ ಒಳಗೆ ವಾಪಸ್ ನೀಡಬೇಕು. ಒಂದು ವೇಳೆ ಈ ಎಲ್ಲ ಸೌಲಭ್ಯಗಳು ಇದ್ದರೂ ಬಿಪಿಎಲ್ ಕಾರ್ಡು ಹೊಂದಿದ್ದರೆ ಅಂತಹವರಿಗೆ ದಂಡದ ಜತೆಗೆ ಶಿಕ್ಷೆ ಸಹ ನೀಡಲಾಗುತ್ತದೆ ಎಂದು ಉಮೇಶ್ ಕತ್ತಿ ಎಚ್ಚರಿಕೆ ನೀಡಿದ್ದಾರೆ.
ಆರ್ಥಿಕವಾಗಿ ಹಿಂದುಳಿದ ಕುಟುಂಬದವರಿಗೆ ಆಹಾರ ಧಾನ್ಯಗಳನ್ನು ಒದಗಿಸಲು ಬಿಪಿಎಲ್ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ. ಆದರೆ ಆರ್ಥಿಕವಾಗಿ ಸದೃಢರಾಗಿರುವ ಕುಟುಂಬದವರು ಕೂಡ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಈ ಹಿಂದೆ ಅಂತಹವರಿಗೆ ಕಾರ್ಡ್ ವಾಪಸ್ ನೀಡಲು ಅವಕಾಶ ಕೊಡಲಾಗಿತ್ತು. ಶೇ 55-60ರಷ್ಟು ಮಂದಿ ಮಾತ್ರ ಕಾರ್ಡ್ ಹಿಂದಿರುಗಿಸಿದ್ದಾರೆ. ಈಗ ಉಳಿದವರಿಗೆ ಕಡೆಯ ಅವಕಾಶ ನೀಡಲಾಗಿದೆ. ಈ ಕುರಿತು ಸಮೀಕ್ಷೆ ನಡೆಸಿ ಕಾರ್ಡ್‍ಗಳನ್ನು ವಾಪಸ್ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









