ಮಾಜಿ ರಾಜ್ಯಸಭಾ ಸದಸ್ಯ ಎಂ.ರಾಮಜೋಯಸ್ ನಿಧನಕ್ಕೆ ಬೈರತಿ ಬಸವರಾಜ ಸಂತಾಪ
ಬೆಂಗಳೂರು : ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ರಾಜ್ಯಪಾಲರು ಹಾಗೂ ಬಿಜೆಪಿಯ ಪ್ರಮುಖ ಹಿತೈಷಿಗಳೂ ಆಗಿದ್ದ ಮಾಜಿ ರಾಜ್ಯಸಭಾ ಸದಸ್ಯ ಎಂ.ರಾಮಜೋಯಸ್ ಅವರು ವಿಧಿವಶರಾಗಿದ್ದಾರೆ. ಅವರಿಗೆ ಇಡೀ ದೇಶದ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
ಅದರಂತೆ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ ಅವರು ಸಂತಾಪ ಸೂಚಿಸಿದ್ದಾರೆ. ಆರ್ ಎಸ್ಎಸ್ನ ನಿಷ್ಠಾವಂತ ಕಾರ್ಯಕರ್ತರಾಗಿ ಭಾರತೀಯ ಜನತಾ ಪಕ್ಷದ ಸಂಘಟನೆಯ ಪ್ರಮುಖ ಪಾತ್ರ ವಹಿಸಿದ್ದರು. ಪಂಜಾಬ್ ಮತ್ತು ಹರಿಯಾಣ ರಾಜ್ಯದ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ಹಾಗೂ ಸುಪ್ರೀಂಕೋರ್ಟ್ನಲ್ಲೂ ನ್ಯಾಯಮೂರ್ತಿಯಾಗಿದ್ದ ರಾಮಜೋಯಸ್ ಅವರು ದೇಶದ ಕೆಲವು ಐತಿಹಾಸಿಕ ತೀರ್ಪುಗಳನ್ನು ನೀಡಿದ ಪ್ರಮುಖ ನ್ಯಾಯಮೂರ್ತಿಗಳ ಸಾಲಿನಲ್ಲಿ ನಿಲ್ಲುತ್ತಾರೆ. ದೇವರು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.








