ಮಾಜಿ ರಾಜ್ಯಸಭಾ ಸದಸ್ಯ ಎಂ.ರಾಮಜೋಯಸ್ ನಿಧನಕ್ಕೆ ರಮೇಶ್ ಜಾರಕಿಹೊಳಿ ಸಂತಾಪ
ಉಡುಪಿ: ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ರಾಜ್ಯಪಾಲರು ಹಾಗೂ ಬಿಜೆಪಿಯ ಪ್ರಮುಖ ಹಿತೈಷಿಗಳೂ ಆಗಿದ್ದ ಮಾಜಿ ರಾಜ್ಯಸಭಾ ಸದಸ್ಯ ಎಂ.ರಾಮಜೋಯಸ್ ಅವರು ವಿಧಿವಶರಾಗಿದ್ದಾರೆ. ಅವರಿಗೆ ಇಡೀ ದೇಶದ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಅದರಂತೆ ಜಸ್ಟಿಸ್ ರಾಮಾಜೋಯೀಸ್ ನಿಧನಕ್ಕೆ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ರಾಜ್ಯಸಭಾ ಸದಸ್ಯ ಎಂ.ರಾಮಜೋಯಸ್ ನಿಧನಕ್ಕೆ ಶೋಭಾ ಕರಂದ್ಲಾಜೆ ಸಂತಾಪ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕರಾಗಿದ್ದ ರಾಮಾಜೋಯೀಸ್ ಅವರು ರಾಜ್ಯ ಸಭಾ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದರು. ಇವರ ದಣಿವರಿಯದ ಕೆಲಸವನ್ನು ಮೆಚ್ಚಿ, ಕೇಂದ್ರ ಸರ್ಕಾರವು ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳ ರಾಜ್ಯಪಾಲರನ್ನಾಗಿ ನೇಮಿಸಿತ್ತು. ಇಂತಹ ಧೀಮಂತ ನಾಯಕರನ್ನು ಕಳೆದುಕೊಂಡಿದ್ದು ದುಃಖದ ಸಂಗತಿಯಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.
ಮಾಜಿ ರಾಜ್ಯಸಭಾ ಸದಸ್ಯ ಎಂ.ರಾಮಜೋಯಸ್ ನಿಧನಕ್ಕೆ ಬೈರತಿ ಬಸವರಾಜ ಸಂತಾಪ
ಇನ್ನೂ ರಾಮಾಜೋಯೀಸ್ ಅವರು ಅಪಾರ ಕಾರ್ಯಕರ್ತರನ್ನು, ವಕೀಲ ಸಮೂಹವನ್ನು ಬಿಟ್ಟು ಅಗಲಿದ್ದು, ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಮತ್ತು ಅವರ ಅಗಲಿದ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಸಚಿವ ರಮೇಶ್ ಜಾರಕಿಹೊಳಿ ಪ್ರಾರ್ಥಿಸಿದ್ದಾರೆ.








