ಬೆಂಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರೋ ಸ್ಯಾಂಡಲ್ ವುಡ್ ನ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿಟ್ಟು ಚಿಕಿತ್ಸೆ ನೀಡಲಾಗ್ತಿದೆ.
ಬುಲೆಟ್ ಪ್ರಕಾಶ್ ಕಿಡ್ನಿ ವೈಫಲ್ಯ ಮತ್ತು ಸೋಂಕಿನಿಂದ ಬಳಲುತ್ತಿದ್ದರು. ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿತ್ತು. ಆದ್ರೆ ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ಸದ್ಯ ವೆಂಟಿಲೇಟರ್ನಲ್ಲಿಟ್ಟು ಚಿಕಿತ್ಸೆಯನ್ನ ನೀಡಲಾಗ್ತಿದೆ.
ಅವರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಫೋರ್ಟಿಸ್ ಆಸ್ಪತ್ರೆಯ ಮಾಧ್ಯಮ ಸಂಪರ್ಕಾಧಿಕಾರಿ ವಿನೋದ್ ಕುಮಾರ್ ಜೆ ಮಾಹಿತಿ ನೀಡಿದ್ದಾರೆ.








