ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ವಿಧಿವಶರಾಗಿದ್ದಾರೆ. ಅವರಿಗೆ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಬುಲೆಟ್ ಪ್ರಕಾಶ್ ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ ಅವರು ಈ ಹಿಂದೆ ತೂಕ ಇಳಿಸಿಕೊಳ್ಳಲು ಸರ್ಜರಿ ಮಾಡಿಸಿಕೊಂಡಿದ್ದೇ ಅವರಿಗೆ ಮುಳುವಾಯ್ತಾ ಅನ್ನೋ ಪ್ರಶ್ನೆ ಕಾಡುತ್ತಿದೆ.
ಒಂದು ಕಾಲದಲ್ಲಿ ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸಿದ್ದ ಬುಲೆಟ್ ಪ್ರಕಾಶ್ ಕೆಲ ವರ್ಷಗಳಿಂದ ಸಿನಿಮಾ ಅವಕಾಶ ಸಿಗದೇ ನೊಂದಿದ್ದರು. ಹೀಗಾಗಿ ಪ್ರಕಾಶ್ ಅವರು, ಎರಡು ವರ್ಷಗಳ ಹಿಂದೆ ತೂಕ ಇಳಿಸಿಕೊಳ್ಳಲು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು. ಅದಾದ ನಂತರ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದರು. ವಿಪರ್ಯಾಸ ಏನಂದ್ರೆ ಶಸ್ತ್ರಚಿಕಿತ್ಸೆಯ ನಂತರವೂ ಬುಲೆಟ್ ಪ್ರಕಾಶ್ ಅವರಿಗೆ ಸಿನಿಮಾಗಳಲ್ಲಿ ಅವಕಾಶ ಕಡಿಮೆಯಾಗಿತ್ತು. ಇದರಿಂದ ಅವರು ಮಾನಸಿಕವಾಗಿ ಬಹಳ ನೊಂದಿದ್ದರು. ಹೀಗಾಗಿ ಶಸ್ತ್ರಚಿಕಿತ್ಸೆಯೇ ಅವರ ಜೀವಕ್ಕೆ ಮುಳ್ಳಾಯಿತಾ..? ಅನ್ನೋ ಅನುಮಾನ ಮೂಡಿದೆ.








