ಬೆಂಗಳೂರು : ಹಾಸ್ಯ ನಟ ಬುಲೆಟ್ ಪ್ರಕಾಶ್ ಅಗಲಿಕೆಗೆ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಎಸ್, ಬುಲೆಟ್ ಪ್ರಕಾಶ್ ಅವರು ಉತ್ತಮ ನಟ. ಕೇವಲ 44ನೇ ವಯಸ್ಸಿಗೆ ವಿಧಿವಶರಾಗಿರುವುದು ಬೇಸರದ ಸಂಗತಿ. ಬಹುದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಇತ್ತೀಚೆಗೆ ಅನಾರೋಗ್ಯದಿಂದ ಚೇತರಿಸಿಕೊಂಡು ಕೆಲವು ಚಿತ್ರಗಳಲ್ಲಿ ಅಭಿನಯಿಸಿದ್ದರು. ಇದೀಗ ಅವರ ಸಾವಿನಿಂದ ಚಿತ್ರರಂಗ ಒಬ್ಬ ಉತ್ತಮ ನಟನನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗದವರು, ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
AIKYAM CUP 2026–27 – ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ
AIKYAM CUP 2026–27 - ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...








