ಕರ್ನಾಟಕ ಪ್ರವೇಶಿಸುವ ಕೇರಳ ಪ್ರಯಾಣಿಕರಿಗೆ ನಿರ್ಬಂಧ – ಪ್ರಧಾನಿ ಮೋದಿಗೆ ಪತ್ರ ಬರೆದ ಕೇರಳ ಸಿಎಂ ಪಿಣರಾಯಿ ವಿಜಯನ್
ತಿರುವನಂತಪುರಂ, ಫೆಬ್ರವರಿ24: ಕೇರಳದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಪ್ರವೇಶಿಸುವ ಪ್ರಯಾಣಿಕರಿಗೆ ನಿರ್ಬಂಧ ಹೇರಿರುವ ಕರ್ನಾಟಕದ ವಿರುದ್ಧ ಕೇರಳ ಸರ್ಕಾರ ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯದಿಂದ ಜನರನ್ನು ಪ್ರವೇಶಿಸಲು ನಿರ್ಬಂಧ ಹೇರಿರುವ ಕರ್ನಾಟಕದ ವಿರುದ್ಧ ಕೇರಳ ಸರ್ಕಾರ ಪ್ರಧಾನಿಯನ್ನು ಸಂಪರ್ಕಿಸಿದೆ.
ನೆರೆಯ ರಾಜ್ಯಕ್ಕೆ ಪ್ರಯಾಣಿಸುವಾಗ ಜನರು ಎದುರಿಸುತ್ತಿರುವ ಕಷ್ಟಗಳನ್ನು ಪರಿಹರಿಸಲು ತುರ್ತು ಹಸ್ತಕ್ಷೇಪ ಮಾಡುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಯಾವುದೇ ರಾಜ್ಯಗಳು ಅಂತರರಾಜ್ಯ ಪ್ರಯಾಣವನ್ನು ತಡೆಯಬಾರದು ಎಂಬ ಕೇಂದ್ರ ಸರ್ಕಾರದ ಸೂಚನೆಗೆ ವಿರುದ್ಧವಾಗಿ ಈ ನಿರ್ಬಂಧಗಳಿವೆ ಎಂದು ಪಿಣರಾಯಿ ಹೇಳಿದ್ದಾರೆ.
ಇದರಿಂದಾಗಿ ಅಗತ್ಯ ಸರಕುಗಳನ್ನು ಸಾಗಿಸುವ ಟ್ರಕ್‌ಗಳ ಜೊತೆಗೆ ವಿದ್ಯಾರ್ಥಿಗಳು, ವೈದ್ಯಕೀಯ ಚಿಕಿತ್ಸೆಗಾಗಿ ಹೋಗುವ ರೋಗಿಗಳು ಸೇರಿದಂತೆ ಅನೇಕ ಜನರು ರಾಜ್ಯದ ಗಡಿಯಲ್ಲಿ ಅನಗತ್ಯ ತೊಂದರೆಗಳಿಗೆ ಒಳಗಾಗುತ್ತಾರೆ ಎಂದು ಪಿಣರಾಯಿ ಪತ್ರದಲ್ಲಿ ಪ್ರಧಾನಿಯವರ ಗಮನಸೆಳೆದಿದ್ದಾರೆ. ಜನರ ಅಂತರರಾಜ್ಯ ಸಂಚಾರಕ್ಕೆ ಕರ್ನಾಟಕ ರಾಜ್ಯವು ನಿರ್ಬಂಧ ಹೇರಿರುವುದು ಭಾರತ ಸರ್ಕಾರದ ಸೂಚನೆಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಕೋವಿಡ್ ನೆಗೆಟಿವ್ ಆರ್‌ಟಿ-ಪಿಸಿಆರ್ ಪ್ರಮಾಣಪತ್ರ ಹೊಂದಿರುವವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ
ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ ಮಂಗಳೂರಿನ ತಲಪಾಡಿ, ಬಂಟ್ವಾಳದ ಸಾರಡ್ಕ, ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ-ಮುಡ್ನೂರು, ಸುಳ್ಯದ ಜಾಲ್ಸೂರು ಗಡಿ ಮಾರ್ಗಗಳ ಮುಖಾಂತರ ಮಾತ್ರ ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸಲು ಅನುಮತಿ ನೀಡಿದ್ದು ಉಳಿದ ಮಾರ್ಗಗಳಿಗೆ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ.
ಪಿಗ್ಮೆಂಟೇಶನ್ ಸಮಸ್ಯೆಗೆ ಮನೆಮದ್ದುಗಳು https://t.co/KQIOaSITSz
— Saaksha TV (@SaakshaTv) February 20, 2021
124 ತಿಂಗಳಲ್ಲಿ ನಿಮ್ಮ ಹಣ ದ್ವಿಗುಣ- ಪೋಸ್ಟ್ ಆಫೀಸ್ ನ ಅದ್ಭುತ ಯೋಜನೆ https://t.co/3C2UQsLiAu
— Saaksha TV (@SaakshaTv) February 20, 2021
ಮಂಗಳೂರು ಶೀರಾ/ಕೇಸರಿಬಾತ್ https://t.co/ZcrcZqQjO1
— Saaksha TV (@SaakshaTv) February 20, 2021