ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರದಲ್ಲಿ ಏನಿದೆ..?
ಬೆಂಗಳೂರು : ಕಾಮಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅದನ್ನ ಸಿಎಂ ಬಿ.ಎಸ್.ಯಡಿಯೂರಪ್ಪ ಅಂಗೀಕರಿಸಿದ್ದಾರೆ.
ಇನ್ನು ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರದಲ್ಲಿ ನನ್ನ ಮೇಲೆ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಇದರ ಬಗ್ಗೆ ಶೀಘ್ರದಲ್ಲೇ ತನಿಖೆ ಆಗಬೇಕು.
ನಾನು ನಿರ್ದೋಷಿಯಾಗುವ ವಿಶ್ವಾಸವಿದ್ದರೂ ನೈತಿಕ ಹೊಣೆಯನ್ನು ಹೊತ್ತು ನಾನು ನನ್ನ ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುರುತ್ತೇನೆ.
ದಯವಿಟ್ಟು ಇದನ್ನ ಅಂಗೀಕರಿಸಬೇಕೆಂದು ತಮ್ಮಲ್ಲಿ ವಿನಂತಿಸುತ್ತೇನೆ ಎಂದು ಬರೆದು ಸಿಎಂಗೆ ಕಳುಹಿಸಿಕೊಟ್ಟಿದ್ದಾರೆ.
ಗೋಕಾಕ್ ನಲ್ಲಿ ಪ್ರತಿಭಟನೆ
ಈ ಮಧ್ಯೆ ರಮೇಶ್ ಜಾರಕಿಹೊಳಿ ಮತ ಕ್ಷೇತ್ರ ಗೋಕಾಕ್ ನಲ್ಲಿ ಸಾಹುಕಾರ್ ಬೆಂಬಲಿಗರು ಯಾವುದೇ ಕಾರಣಕ್ಕೂ ರಾಜೀನಾಮೆ ಅಂಗೀಕರಿಸಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಅನ್ನೋ ಸುದ್ದಿ ತಿಳಿಯುತ್ತಿದ್ದಂತೆ ಗೋಕಾಕ್ ನ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರು, ಯಾವುದೇ ಕಾರಣಕ್ಕೂ ರಾಜೀನಾಮೆ ಅಂಗೀಕರಿಸಬಾರದು.
ಇಂದು ಅವರ ರಾಜೀನಾಮೆಯನ್ನ ಅಂಗೀಕರಿಸಿದ್ರೆ ಬೆಳಗಾವಿ ಬಂದ್ ಮಾಡುವುದಾಗಿ ಎಂದು ಘೋಷಣೆಗಳನ್ನ ಕೂಗಿದ್ದಾರೆ.