ಬೆಂಗಳೂರು : ಲಾಕ್ ಡೌನ್ ನಿಂದ ಬಡವರು ಹಾಗೂ ಮಧ್ಯಮ ವರ್ಗದ ಜನತೆ ತೊಂದರೆಯಲ್ಲಿದ್ದಾರೆ. ಈ ಸನ್ನಿವೇಶವನ್ನು ದುರ್ಬಳಕೆ ಮಾಡಿಕೊಂಡು ಕೆಲ ವ್ಯಾಪಾರಸ್ತರು ಅಗತ್ಯ ವಸ್ತುಗಳ ಬೆಲೆಯನ್ನು ದಿಢೀರ್ ಏರಿಕೆ ಮಾಡಿದ್ದಾರೆ. ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಅಗತ್ಯ ವಸ್ತುಗಳ ಬೆಲೆಯನ್ನು ಶೇ. 20-30ರಷ್ಟು ಏರಿಕೆ ಮಾಡಿದರೆ ಈಗಾಗಲೇ ಕಷ್ಟದಲ್ಲಿರುವ ಬಡವರಿಗೆ ಇನ್ನಷ್ಟು ತೊಂದರೆಯಾಗುತ್ತದೆ. ಅಕ್ಕಿ, ಬೇಳೆ ಬೆಲೆ ಹೆಚ್ಚಾದರೆ ಖರೀದಿ ಮಾಡುವುದಾದರೂ ಹೇಗೆ ? ಈಗಲೇ ಅವರಿಗೆ ದುಡಿಮೆ ಇಲ್ಲ, ಹಣವೂ ಇಲ್ಲ. ಈ ಕುರಿತು ಗಮನ ಹರಿಸಿ, ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರು ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದಿದ್ದಾರೆ.
ಹಣ್ಣು, ತರಕಾರಿ ಸೇರಿದಂತೆ ತಾವು ಬೆಳೆದಿರುವ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡುವವರೇ ಇಲ್ಲ ಎಂದು ಅನೇಕ ರೈತರು ದೂರವಾಣಿ ಕರೆ ಮಾಡಿ ಹೇಳೂತ್ತಿದ್ದಾರೆ. ಅದೇ ರೀತಿ ಭತ್ತ, ರಾಗಿಯನ್ನೂ ಖರೀದಿಸುತ್ತಿಲ್ಲ ಎನ್ನುತ್ತಿದ್ದಾರೆ. ಈ ಕುರಿತೂ ಸರ್ಕಾರ ಗಮನ ಹರಿಸಬೇಕು. ಇದೆ ವೇಳೆ ಬೆಳೆ ಹಾನಿ-ಪರಿಹಾರಕ್ಕೆ ಆಗ್ರಹಿಸಿದರು.
ರಾಜ್ಯದ ವಿವಿಧೆಡೆ ಇತ್ತೀಚೆಗೆ ಭಾರಿ ಮಳೆಯಾಗಿದೆ ಇದರಿಂದ ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತಿತರ ಜಿಲ್ಲೆಗಳಲ್ಲಿ ಭತ್ತ, ಕಬ್ಬು, ಬಾಳೆ ಬೆಳೆಗೆ ಹಾನಿಯಾಗಿದೆ. ಎಲ್ಲೆಲ್ಲಿ ಹಾನಿಯಾಗಿದೆ. ಅಲ್ಲಿ ಪರಿಹಾರ ಕೊಡಬೇಕು. ಬೆಳೆ ನಷ್ಟ ಕುರಿತು ಸಮೀಕ್ಷೆ ನಡೆಸಬೇಕು.
ವೇತನ ಕಡಿತಕ್ಕೆ ಸಹಮತ
ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿನ್ನೆ ದೂರವಾಣಿ ಕರೆ ಮಾಡಿ, ಶಾಸಕರು, ಸಂಸದರ ವೇತನ ಕಡಿತ ಮಾಡುವುದಾಗಿ ಹೇಳಿದ್ದಾರೆ. ಅದಕ್ಕೆ ನಮ್ಮ ಸಹಮತವೂ ಇದೆ. ಸಂಕಷ್ಟದ ಸಂದಭೃದಲ್ಲಿ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷಗಳು ಸಹಕರಿಸಬೇಕಾಗುತ್ತದೆ. ಇದಕ್ಕೆ ನಮ್ಮ ಒಪ್ಪಿಗೆಯೂ ಇದೆ ಎಂದು ಸಿದ್ದರಾಮಯ್ಯ ಹೇಳಿದರು.
ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್
ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...








