ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು
ಬೆಂಗಳೂರು : ರಾಸಲೀಲೆ ವಿಡಿಯೋ ಪ್ರಕರಣ ಸಂಬಂಧ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ರಮೇಶ್ ಜಾರಕಿಹೊಳಿ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ.
ಹೌದು..! ಸಚಿವ ಸ್ಥಾನವನ್ನು ದುರುಪಯೋಗ ಮಾಡಿಕೊಂಡು ರಮೇಶ್ ಜಾರಕಿಹೊಳಿ ಯುವತಿಯನ್ನ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಅಂತಾ ಆರೋಪಿಸಿ ಕನ್ನಡಿಗರ ರಕ್ಷಣಾ ವೇದಿಕೆಯ ಕನ್ನಡ ಪ್ರಕಾಶ್ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ವಂಚನೆ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸೂಕ್ತ ರಕ್ಷಣೆ ಒದಗಿಸಲು ಮನವಿ ಮಾಡಿಕೊಂಡಿರುವ ದೂರುದಾರು ರಮೇಶ್ ಜಾರಕಿಹೊಳಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿ ಕೋರಿದ್ದಾರೆ.
ಈಗಾಗಲೇ ಅವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ದಾಖಲಾಗಿದ್ದು, ಸಂತ್ರಸ್ತೆಗೆ ಜೀವ ಬೆದರಿಕೆ ಇರುವ ಕಾರಣ ಮಹಿಳೆ ಹೊರಬಂದು ಹೇಳಿಕೆ ಕೊಡಲಾಗುತ್ತಿಲ್ಲ.
ಮಹಿಳಾ ಆಯೋಗವು ದೌರ್ಜನ್ಯಕ್ಕೊಳಗಾದ ಮಹಿಳೆಗೆ ಸೂಕ್ತ ಭದ್ರತೆ ನೀಡಬೇಕು.ಸಂತ್ರಸ್ತೆ ಮುಕ್ತವಾಗಿ ಹೊರಬಂದು ಹೇಳಿಕೆ ನೀಡಲು ಅವಕಾಶ ಮಾಡಿಕೊಡಬೇಕು ಎಂದು ದೂರಿನಲ್ಲಿ ಕೇಳಿಕೊಂಡಿದ್ದಾರೆ.










