ಅತ್ಯಾಚಾರ ಸಂತ್ರಸ್ತೆಗೆ ಆರೋಪಿಯ ಕುಟುಂಬಸ್ಥರಿಂದ ಹಿಂಸೆ : ಯುವತಿ ಆತ್ಮಹತ್ಯೆ..!
ಉತ್ತರಪ್ರದೇಶ : ಉತ್ತರಪ್ರದೇಶದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಕಾಮುಕನಿಂದ ಅತ್ಯಾಚಾರಕ್ಕೆ ಒಳಗಾಗಿದ್ದ 21 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆರೋಪಿಗಳ ಕುಟುಂಬಸ್ಥರು ಕೇಸ್ ವಾಪಸ್ ಪಡೆಯುವಂತೆ ಒತ್ತಡ ಹೇರಿ ಬೆದರಿಕೆ ಹಾಕಿರುವ ಕಾರಣದಿಂದಲೇ ಯುವತಿ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಆಕೆಯ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಉತ್ತರಪ್ರದೇಶದ ಸಂಭಲ್ ಜಿಲ್ಲೆಯಲ್ಲಿ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ. ಯುವತಿ ನೇಣಿಗೆ ಶರನಾಗಿದ್ದು, ಈ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ ಬಳಿಕ ಮೂವರನ್ನ ಬಂಧಿಸಲಾಗಿದೆ.
ತಂದೆಯ ಮೇಲಿನ ದ್ವೇಷಕ್ಕೆ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ..!
ಕಳೆದ ತಿಂಗಳು ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಯುವತಿಯ ತಂದೆ ದೂರು ದಾಖಲಿಸಿದ್ದರು. ಬಳಿಕ ಆರೋಪಿಯಾಗಿದ್ದ ಆಶಿಶ್ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಆದ್ರೆ ಆತನ ಕುಟುಂಬಸ್ಥರು ಮಾತ್ರ ಕೇಸ್ ಹಿಂಪಡೆಯುವಂತೆ ಯುವತಿಗೆ ಮಾನಸಿಕವಾಗಿ ತೀರ ಒತ್ತಡ ಹೇರಿದ್ದಲ್ಲದೆ ಬೆದರಿಕೆಯನ್ನ ಹಾಕಿದ್ದೆಉ ಎನ್ನಲಾಗಿದೆ. ಇದೇ ಕಾರಣಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಪೋಷಕರ ದೂರು ಆಧರಿಸಿ ಆರೋಪಿಯ ತಾಯಿ, ತಂದೆ ಹಾಗೂ ಸಹೋದರನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.