ನವದೆಹಲಿ: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಮಾರ್ಚ್ 24ರಿಂದ ಏಪ್ರಿಲ್ 14ರವರೆಗೆ ಒಟ್ಟು 21 ದಿನಗಳ ಕಾಲ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಆದರೆ, ಕಠಿಣ ಕ್ರಮಗಳ ಹೊರತಾಗಿಯೂ ಕೊರೋನಾ ಸೋಂಕು ಹತೋಟಿಗೆ ಬರುತ್ತಿಲ್ಲ. ದಿನೇ ದಿನೇ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಹಿನ್ನೆಲೆಯಲ್ಲಿ ಲಾಕ್ ಡೌನ್ ಅನ್ನು ಏಪ್ರಿಲ್ 14ರ ನಂತರವೂ ಮುಂದುವರೆಸುವ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.
ಏಪ್ರಿಲ್ 14 ರ ನಂತರವೂ ಲಾಕ್ ಡೌನ್ ಮುಂದುವರೆಸಬೇಕೇ ಬೇಡವೇ ಎಂಬ ವಿಚಾರವಾಗಿ ಪ್ರಧಾನಿ ಮೋದಿ ಅವರು ಇಂದು ಸರ್ವಪಕ್ಷಗಳ ಸಭೆ ನಡೆಸಿದರು.ಈ ವೇಳೆ ಎಲ್ಲ ಸಂಸದರ ಜೊತೆ ಚರ್ಚಿಸಿದ ಮೋದಿ ಸದ್ಯದ ಪರಿಸ್ಥಿತಿಯಲ್ಲಿ ಲಾಕ್ ಡೌನ್ ಮುಂದುವರೆಸುವುದು ಅತ್ಯಗತ್ಯ ಎಂದು ಹೇಳಿದ್ದಾರೆ.








