ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ರಾಜ್ಯದ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಾಳೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ನಾಳೆ ಬೆಳಿಗ್ಗೆ 11ಕ್ಕೆ ಸಚಿವ ಸಂಪುಟ ಸಭೆ ನಡೆಯಲಿದ್ದು ಏಪ್ರಿಲ್ 14ರ ಬಳಿಕ ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆಸಬೇಕೇ ಬೇಡವೇ ಎಂಬ ಬಗ್ಗೆ ಹಾಗೂ ರಾಜ್ಯದ ಜಿಲ್ಲೆಗಳಲ್ಲಿ ಕೊರೊನಾ ಲಾಕ್ ಡೌನ್ ನಿಂದ ಆದ ಪರಿಣಾಮ, ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಸಭೆಯಲ್ಲಿ ಯಡಿಯೂರಪ್ಪ ಮಾಹಿತಿ ಪಡೆಯಲಿದ್ದಾರೆ.
ಇನ್ನು ಏಪ್ರಿಲ್ 14 ರಂದು ಲಾಕ್ ಡೌನ್ ತೆರವು ಮಾಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಲ್ಲದೇ ಇದೇ ಏ.11ರಂದು ಪ್ರಧಾನಿ ದೇಶದ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನ ಮತ್ತು ವಿವರವನ್ನು ಯಡಿಯೂರಪ್ಪ ವಿಡಿಯೋ ಸಂವಾದದಲ್ಲಿ ಪ್ರಧಾನಿಗೆ ತಿಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.








