ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ : TMC ಕೈವಾಡವಿದ್ಯಾ..?
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಇನ್ನೇ ಸಮೀಪದಲ್ಲೇ ಇರುವ ಬೆನ್ನಲ್ಲೇ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹೌದು ಪಶ್ಚಿಮಬಂಗಾಳದ ನಾಡಿಯಾ ಜಿಲ್ಲೆಯ ಹರಿಂಘಾಟಾ ಪ್ರದೇಶದಲ್ಲಿ ಬಿಜೆಪಿ ಮುಖಂಡರೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಕಪಿಲೇಶ್ವರ್ ಸಂತೋಷ್ ಪುರ್ ನ ಟೀ ಸ್ಟಾಲ್ ಸಮೀಪ ಸಂಜಯ್ ದಾಸ್ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಹರಿಂಘಾಟಾ ಮುನ್ಸಿಪಾಲ್ಟಿಯ ವಾರ್ಡ್ ನಂಬರ್ 10ರ ಬಿಜೆಪಿ ಅಧ್ಯಕ್ಷರಾಗಿದ್ದ ಸಂಜಯ್ ದಾಸ್ ಮೇಲೆ ಗುಂಡಿನ ದಾಳಿ ನಡೆದಿದೆ. ಈ ಘಟನೆಯ ಹಿಂದೆ ತೃಣಮೂಲ ಕಾಂಗ್ರೆಸ್ ನ ಗೂಂಡಾಗಳ ಕೈವಾಡ ಇದ್ದಿರುವುದಾಗಿ ಬಿಜೆಪಿ ಆರೋಪಿಸಿದೆ.
ಬೈದು ಬುದ್ದಿವಾದ ಹೇಳಿದ ಶಿಕ್ಷಕನಿಗೆ ಗುಂಡಿಟ್ಟು ಕೊಂದ ಪಿಯುಸಿ ವಿದ್ಯಾರ್ಥಿ..!
ಆದ್ರೆ ತೃಣಮೂಲ ಕಾಂಗ್ರೆಸ್ ತನ್ನ ಮೇಲಿನ ಆರೋಪವನ್ನ ತಳ್ಳಿ ಹಾಕಿದೆ. ಇದು ಗುಂಪು ಘರ್ಷಣೆಯಲ್ಲಿ ನಡೆದ ಘಟನೆಯಾಗಿದೆ ಎಂದು ದೂರಿದೆ. ಗುಂಪಿನಲ್ಲಿದ್ದ ಒಬ್ಬ ವ್ಯಕ್ತಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಗುಂಡು ಸೊಂಟಕ್ಕೆ ತಗುಲಿರುವುದಾಗಿ ಸಂಜಯ್ ದಾಸ್ ಪೊಲೀಸರಿಗೆ ತಿಳಿಸಿದ್ದಾರೆ. ಇನ್ನೂ ಘಟನೆಯಲ್ಲಿ ಸಂಜಯ್ ದಾಸ್ ಅವರು ಅಅಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ದಾಳಿಗೆ ಒಳಗಾದ ಬಿಜೆಪಿ ಮುಖಂಡನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.








