ರಾಜ್ಯ ಬಜೆಟ್ 2021 : ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ
ಬೆಂಗಳೂರು : ಕಾಂಗ್ರೆಸ್ ಸದಸ್ಯರ ಸಭಾತ್ಯಾಗದ ಮಧ್ಯೆಯೂ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.
ಸಿಎಂ ತಮ್ಮ ಭಾಷಣದಲ್ಲಿ ಕೊರೊನಾ ಸಂಕಷ್ಟ ಒಂದು ದುಸ್ವಪ್ನ ಎಂದು ಕೊರೊನಾ ಪರಿಸ್ಥಿತಿಯನ್ನ ಬಣ್ಣಿಸಿದ್ರು.
ಸಂಕಷ್ಟದ ನಡುವೆಯೂ ಸರ್ಕಾರ ಕೆಲಸ ಮಾಡಿದೆ ಎಂದು ತಿಳಿಸಿದ ಸಿಎಂ ಸರ್ಕಾರದ ಸಾಧನೆಗಳನ್ನು ವಿವರಿಸುತ್ತಿದ್ದಾರೆ.
ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಆರ್ಥಿಕ ಕುಸಿತ ಕಂಡಿದೆ. ಪ್ರವಾಹ ನಡೆಯೂ ಶೇ ಕೃಷಿ ಕ್ಷೇತ್ರದಲ್ಲಿ ಬೆಳವಣಿಗೆ ಕಂಡುಬಂದಿದೆ ಎಂದು ತಿಳಿಸಿದ್ರು.
ಪ್ರಮುಖ ಅಂಶಗಳು
ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ
2 ಕೋಟಿ ರೂವರೆಗೆ ಮಹಿಳಾ ಉದ್ಯಮಿದಾರರಿಗೆ ಸಾಲ ಯೋಜನೆ
ಮಹಿಳಾ ಉದ್ಯಮೆದಾರರಿಗೆ ಶೇ.4ರ ಬಡ್ಡಿದರದಲ್ಲಿ ಸಾಲ
ಜಿಲ್ಲಾ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರ ಸ್ಥಾಪನೆ
ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್ ಲೈನ್ ಮಾರುಕಟ್ಟೆ ವ್ಯವಸ್ಥೆ
ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ನಾರಿ ಶಕ್ತಿಯನ್ನು ಸ್ಮರಿಸಿದ ಯಡಿಯೂರಪ್ಪ, ಮಹಿಳಾ ಯೋಜನೆಗಳ ಘೋಷಣೆ ಮೂಲಕವೇ ಬಜೆಟ್ ಗೆ ಚಾಲನೆ ನೀಡಿದ್ದಾರೆ.









