Karnataka Budget 2021 : ಹಳೆ ಮೈಸೂರು ಭಾಗಕ್ಕೆ ಸಿಕ್ಕಿದ್ದೇನು..?
ಬೆಂಗಳೂರು : ಆರ್ಥಿಕ ಸಂಕಷ್ಟದ ಮಧ್ಯೆ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯ ಬಜೆಟ್ ಅನ್ನು ಮಂಡಿಸಿದ್ದಾರೆ. ಇದರಲ್ಲಿ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದ್ದು, ಹಳೆ ಮೈಸೂರು ಭಾಗಕ್ಕೆ ಸಿಕ್ಕಿದ್ದೇನು..? ಅಂತ ನೋಡೊದಾದ್ರೆ..
*ರಾಮನಗರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ
*ಮೈಸೂರಿನ ಕಬಿನಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ
*ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 384 ಕೋಟಿ ರೂ.
*ಹಾಸನ ವಿಮಾನ ನಿಲ್ದಾಣಕ್ಕೆ 175 ಕೋಟಿ ರೂ.
*ಮೈಸೂರಿನಲ್ಲಿ ಕಿದ್ವಾಯಿ ಆಸ್ಪತ್ರೆಯ ಮಾದರಿಯಲ್ಲಿ ಆಸ್ಪತ್ರೆಗಳ ನಿರ್ಮಾಣ
*ಶಿವಮೊಗ್ಗ & ಮೈಸೂರಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ
*ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆ
*ಮಂಡ್ಯ ಸ್ಟೇಡಿಯಂಗೆ 10 ಕೋಟಿ ರೂ.
*ಡಾ ಎಚ್ ನರಸಿಂಹಯ್ಯ ಗೌರವಾರ್ಥ ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಹೊಸೂರಿನಲ್ಲಿ 200 ಎಕರೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ವಿಜ್ಞಾನ ಕೇಂದ್ರ ನಿರ್ಮಾಣ
* ಸಿಂಗೇನ ಅಗ್ರಹಾರ ಸಮೀಪದ ಗುಳಿಮಂಗಳ ಗ್ರಾಮದಲ್ಲಿ ಅತ್ಯಾಧುನಿಕ ತರಕಾರಿ ಮಾರುಕಟ್ಟೆ ನಿರ್ಮಾಣ
*ಹಾಸನದ ಶ್ರವಣ ಬೆಳಗೋಳ ಮತ್ತು ಇತರೆ ಜೈನ ಕ್ಷೇತ್ರಗಳ ಅಭಿವೃದ್ಧಿಗೆ 50 ಕೋಟಿ ರೂ.
*ಶಿವಮೊಗ್ಗ ಜಿಲ್ಲೆಯಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೆ
*ಕೋರಮಂಗಲ ರಾಜಕಾಲುವೆ ಅಭಿವೃದ್ಧಿಗೆ 169 ಕೋಟಿ ರೂ.
*ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಭಾಗದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ*ಬೈಯಪ್ಪನಹಳ್ಳಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಸುಸ್ಸಜ್ಜಿತ ಹೂವಿನ ಮಾರುಕಟ್ಟೆ
*ಬೆಂಗಳೂರು ಸಮಗ್ರ ಅಭಿವೃದ್ಧಿಗೆ 7,795 ಕೋಟಿ ರೂ.
* ಬೆಂಗಳೂರಿನಲ್ಲಿ 67 ಕಿಲೋ ಮೀಟರ್ ಫೆರಿಫರಲ್ ರಿಂಗ್ ರಸ್ತೆ
*ಬೆಂಗಳೂರಿನ ಮೂರು ಕಡೆ ಮೇಲ್ಸೇತವೆ ನಿರ್ಮಾಣ