ಗದಗ: ರಾಜ್ಯದಲ್ಲಿ ಕೊರೊನಾಸುರನ ಮರಣಮೃದಂಗ ಮುಂದುವರಿದಿದ್ದು, ಗದಗದಲ್ಲಿ 6ನೇ ಬಲಿ ಪಡೆದುಕೊಂಡಿದೆ. ಏಪ್ರಿಲ್ 4ರಂದು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 80 ವರ್ಷದ ವೃದ್ಧೆ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ವೃದ್ಧೆಗೆ ಏಪ್ರಿಲ್ 7ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ಕುರಿತು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸ್ಪಷ್ಟಪಡಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಈವರೆಗೆ 181 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು ಸಾವನ್ನಪ್ಪಿದ ವೃದ್ಧೆ ಸೇರಿ ಒಟ್ಟು 6 ಜನ ಸಾವನ್ನಪ್ಪಿದ್ದಾರೆ.








