ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತೆ : ಬಿ ವೈ ವಿಜಯೇಂದ್ರ..!
ಚಿತ್ರದುರ್ಗ: ಕಾಂಗ್ರೆಸ್ ದಿನೇ ದಿನೇ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ದೇಶದಲ್ಲಿ ಅಸ್ತಿತ್ವ ಕಳೆದುಕೊಂಡಂತೆ ರಾಜ್ಯದಲ್ಲೂ ಕಳೆದುಕೊಳ್ಳತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಚಿತ್ರದುರ್ಗದಲ್ಲಿ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಭದ್ರಾವತಿಯಲ್ಲಿ ಜೈ ಶ್ರೀರಾಮ್ ಪರ ಕಾರ್ಯಕರ್ತರಿಂದ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದು ತಪ್ಪಾ. ಘೋಷಣೆ ಕೂಗಿದ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡಿ, ಆ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ.
ಛತ್ತೀಸ್ ಗಢ – 13 ಮಂದಿ ತೃತೀಯಲಿಂಗದವರು ಕಾನ್ ಸ್ಟೇಬಲ್ ಗಳಾಗಿ ಆಯ್ಕೆ..!
ಅದಕ್ಕೆ ಬೆಂಬಲ ನೀಡುವ ಮೂಲಕ ಅಸ್ತಿತ್ವ ಹುಡುಕಲು ಹೊರಟಿದೆ. ಬಿಜೆಪಿ ಪಕ್ಷದ ಕಾರ್ಯಕರ್ತರು, ನಮ್ಮ ಪಕ್ಷ ಸದೃಢವಾಗಿದೆ. ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದು, ಕಾಂಗ್ರೆಸ್ ಪಕ್ಷ ಗೂಂಡಾಗಿರಿ ಮಾಡಲು ಬಿಜೆಪಿ ಅವಕಾಶ ನೀಡಲ್ಲ ಎಂದಿದ್ದಾರೆ. ಅಲ್ಲದೇ ಸಿಡಿ ರಾಮ ಬಾಂಬೆ ರಾಮ ಎಂಬ ರಮೇಶ್ ಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ವಿಜಯೇಂದ್ರ ಎಲುಬಿಲ್ಲದ ನಾಲಿಗೆ ಏನು ಬೇಕಾದರು ಮಾತನಾಡುತ್ತದೆ. ಇದಕ್ಕೆಲ್ಲಾ ರಾಜ್ಯದ ಜನತೆ ಉತ್ತರ ಕೊಡುತ್ತಾರೆ ಎಂದಿದ್ದಾರೆ.








