ಬೆಂಗಳೂರು : ದೇಶಾದ್ಯಂತ ಲಾಕ್‌ಡೌನ್ ಮಾಡಲಾಗಿದ್ದು ಬಡವರು ಒಂದು ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಅಂಥವರಿಗೆ ಈಗಾಗಲೇ ಹಲವು ತಾರೆಯರು ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡುತ್ತಿದ್ದು ಇದೀಗ ನಟಿ ರಾಧಿಕಾ ಕುಮಾರಸ್ವಾಮಿ ಬಡ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ.
ಕೊರೊನಾದಿಂದ ಸದಾ ಭಿಕ್ಷಾಟನೆ ಮಾಡಿಯೇ ಜೀವನ ಸಾಗಿಸುತ್ತಿದ್ದ ಮಂಗಳಮುಖಿಯರು ಸಂಕಷ್ಟ ಎದುರಿಸುತ್ತಿದ್ದಾರೆ. ಹಾಗೆಯೇ ದಿನಗೂಲಿ ಕಾರ್ಮಿಕರು ಕೂಡಾ ಒಂದು ಹೊತ್ತಿನ ಊಟಕ್ಕೆ ಕಷ್ಟಪಡುವಂತಾಗಿದ್ದು ಇವರಿಗೆ ರಾಧಿಕಾ ಕುಮಾರಸ್ವಾಮಿ ನೆರವಾಗಿದ್ದಾರೆ. ರಾಧಿಕಾ ಅವರು ಮಂಗಳಮುಖಿಯರು ಹಾಗೂ ಬಡವರಿಗೆ ಅಕ್ಕಿ, ಬೇಳೆ ಸೇರಿದಂತೆ ವಿವಿಧ ರೀತಿಯ ಆಹಾರ ಸಾಮಗ್ರಿಗಳನ್ನು ದಾನ ಮಾಡುತ್ತಿದ್ದು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
https://www.facebook.com/114510049956272/videos/217732869562794
ಈ ವಿಡಿಯೋ ಪೋಸ್ಟ್ ಮಾಡಿರುವ ಅವರು, ನಾವೆಲ್ಲರೂ ಮಾನವರು, ಇಂತಹ ಸಮಯದಲ್ಲಿ ದುರ್ಬಲರಿಗೆ, ಅಗತ್ಯವಿರುವವರಿಗೆ ಸಹಾಯ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಭಾವಿಸುತ್ತೇನೆ. ಹೀಗಾಗಿ ಬೆಂಗಳೂರಿನಲ್ಲಿ ಅಗತ್ಯವಿರುವವರಿಗೆ ಸ್ವಯಂ ಪ್ರೇರಣೆಯಿಂದ ಆಹಾರ ಪದಾರ್ಥ ವಿತರಿಸುತ್ತಿದ್ದೇನೆ ಎಂದು ಬರೆದಿದ್ದಾರೆ.








