ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಧರಣಿ ಸತ್ಯಾಗ್ರಹ
ಬೆಂಗಳೂರು : ಪ್ರಬಲ ಜಾತಿಗಳನ್ನು 2ಂ ಮೀಸಲಾತಿ ಪಟ್ಟಿಗೆ ಸೇರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು. ನಗರದ ಮೌರ್ಯ ಸರ್ಕಲ್ ನ ಗಾಂಧಿ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ನಡೆಯಿತು.
ಈ ಧರಣಿ ಸತ್ಯಾಗ್ರಹದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಹೆಚ್ ಎಂ ರೇವಣ್ಣ,ಮಾಜಿ ಶಾಸಕ ಲಕ್ಷ್ಮಿ ನಾರಾಯಣ, ಮುಖ್ಯ ಮಂತ್ರಿ ಚಂದ್ರು ಭಾಗಿಯಾಗಿದ್ದರು.
ಪ್ರಮುಖ ಬೇಡಿಕೆಗಳು
ಪ್ರಬಲ ಜಾತಿಗಳನ್ನು 2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು
ಊ.ಕಾಂತರಾಜು ಆಯೋಗದ ಜಾತಿವಾರು ಸಮೀಕ್ಷೆಯನ್ನು ಕೂಡಲೇ ಬಿಡುಗಡೆ ಮಾಡಬೇಕು
ಆ.ದೇವರಾಜು ಅರಸು ಅಭಿವೃದ್ಧಿ ನಿಗಮಕ್ಕೆ 2000 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಬೇಕು.










