ಬೆಂಗಳೂರು : ಲಾಕ್ ಡೌನ್ ಸೇರಿದಂತೆ ಹಲವು ಮುನ್ನೆಚ್ಚರಿಕಾ ಕ್ರಮಗಳ ಹೊರತಾಗಿಯೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ನಿನ್ನೆ ರಾಜ್ಯದಲ್ಲಿ 16 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ಮೂಲಕ ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆಯಾಗಿತ್ತು. ಇಂದು ಮತ್ತೆ 10 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ.
ಮಾರ್ಚ್ 31ರಂದು ರಾಜ್ಯದಲ್ಲಿ 101 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಈಗ ಕೇವಲ 11 ದಿನಗಳಲ್ಲಿ 106 ಮಂದಿಗೆ ಸೋಂಕು ತಗುಲಿದೆ. ಇಂದು ರಾಜ್ಯದಲ್ಲಿ ಮತ್ತೆ 10 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದ ದೃಢಪಟ್ಟಿದೆ.








